ನವದೆಹಲಿ ಜೂ.4 NEWS DESK :: ಹೆಚ್ಎಂಪಿವಿ ಸೋಂಕು ಚೀನಾದಲ್ಲಿ ವ್ಯಾಪಕವಾಗಿದ್ದು, ಉಸಿರಾಟ ಸಂಬಂಧಿ ಆರೋಗ್ಯ ಸಮಸ್ಯೆಗಳ ಮೇಲೆ ನಿಗಾ ಇಡಲಾಗಿದೆ. ಸದ್ಯಕ್ಕೆ ಭಾರತದಲ್ಲಿ ಯಾವುದೇ ಪ್ರಕರಣಗಳು ಪತ್ತೆಯಾಗಿಲ್ಲ. ಆತಂಕ ಪಡುವ ಅಗತ್ಯವಿಲ್ಲ ಎಂದು ಕೇಂದ್ರ ಸರ್ಕಾರ ಹೇಳಿದೆ. ಈ ಕುರಿತು ಆರೋಗ್ಯ ಸೇವೆಗಳ ಮಹಾನಿರ್ದೇಶಕರಾದ ಡಾ.ಅತುಲ್ ಗೋಯಲ್ ಅವರು ಪ್ರತಿಕ್ರಿಯೆ ನೀಡಿದ್ದು, ಹೆಚ್ಎಂಪಿವಿ ವೈರಸ್ ಶೀತದಂತಹ ಲಕ್ಷಣಗಳನ್ನು ಹೊಂದಿದ್ದು, ಮಕ್ಕಳು ಹಾಗೂ ವೃದ್ಧರಲ್ಲಿ ಜ್ವರ ಕಾಣಿಸಿಕೊಳ್ಳಬಹುದು. ದೇಶದಲ್ಲಿ 2024ರ ಡಿಸೆಂಬರ್ ನಲ್ಲಿ ಉಸಿರಾಟ ಸಂಬಂಧಿ ಸಮಸಯೆಗಳು ಅಧಿಕ ಸಂಖ್ಯೆಯಲ್ಲಿ ವರದಿಯಾಗಿಲ್ಲ. ಪ್ರಸ್ತುತ ಪರಿಸ್ಥಿತಿ ಅಪಾಯಕಾರಿಯಾಗಿಲ್ಲ. ಒಂದೊಮ್ಮೆ ಸಮಸ್ಯೆ ಉಲ್ಬಣಿಸಿದರೂ ನಮ್ಮ ಆಸ್ಪತ್ರೆಗಳಲ್ಲಿ ಅದಕ್ಕೆ ಬೇಕಾದಷ್ಟು ವ್ಯವಸ್ಥೆಗಳು ಲಭ್ಯವಿದೆ ಎಂದು ಹೇಳಿದರು. ಇದೇ ವೇಳೆ ಸೋಂಕು ತಗುಲದಂತೆ ಮುನ್ನೆಚ್ಚರಿಕೆ ವಹಿಸಲು ಸಲಹೆ ನೀಡಿದರು. ಭಾರತದಲ್ಲಿ ಈ ವೈರಸ್ ಪ್ರಕರಣ ಪತ್ತೆಯಾಗಿಲ್ಲ. ಚಳಿಗಾಲದಲ್ಲಿ ಉಸಿರಾಟ ಸಂಬಂಧಿತ ಸಮಸ್ಯೆಗಳು ಕಾಣಿಸಿಕೊಳ್ಳುವುದು ಸಾಮಾನ್ಯವಾಗಿದೆ. ಭಾರತದ ಆರೋಗ್ಯ ವಿಭಾಗ ಯಾವುದೇ ಪರಿಸ್ಥಿತಿ ಎದುರಿಸಲು ಸನ್ನದ್ಧವಾಗಿದೆ. ಹೀಗಾಗಿ ಜನರು ಆತಂಕ ಪಡುವ ಅವಶ್ಯಕತೆ ಇಲ್ಲ ಎಂದು ಹೇಳಿದೆ.