ಹುಣಸೂರು NEWS DESK ಜ.4 : ಕಾರು ಮತ್ತು ಓಮ್ನಿ ನಡುವೆ ಡಿಕ್ಕಿ ಸಂಭವಿಸಿ ಆರು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮೈಸೂರು-ಹುಣಸೂರು ಹೆದ್ದಾರಿಯ ಸೋಮನಹಳ್ಳಿ ಬಳಿ ಹೆದ್ದಾರಿಯಲ್ಲಿ ನಡೆದಿದೆ. ಮೈಸೂರು ಕಡೆಯಿಂದ ಬರುತ್ತಿದ್ದ ತಮಿಳುನಾಡು ಭಾಗದ ಕಾರು ಮತ್ತು ಹುಣಸೂರು ಕಡೆಯಿಂದ ಮೈಸೂರು ಕಡೆಗೆ ತೆರಳುತ್ತಿದ್ದ ಚಿತ್ರದುರ್ಗದ ಓಮ್ನಿ ನಡುವೆ ಡಿಕ್ಕಿ ನಡುವೆ ಡಿಕ್ಕಿ ಸಂಭವಿಸಿ ಕಾರು ಮಗುಚಿಕೊಂಡಿತು. ಓಮ್ನಿ ಸಂಪೂರ್ಣವಾಗಿ ಜಖಂಗೊಂಡಿದೆ. ಎರಡೂ ವಾಹನದಲ್ಲಿ ಪ್ರಯಾಣಿಸುತ್ತಿದ್ದ ಆರು ಮಂದಿಗೆ ಗಂಭೀರ ಗಾಯಗಳಾಗಿದ್ದು, ಮೈಸೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಿಂದ ಹೆದ್ದಾರಿಯಲ್ಲಿ ವಾಹನದಟ್ಟಣೆ ಏರ್ಪಟ್ಟು ಸಂಚಾರ ವ್ಯವಸ್ಥೆ ಅಸ್ತವ್ಯಸ್ತಗೊಂಡಿತು. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.