ಮಡಿಕೇರಿ NEWS DESK ಜ.6 : ಮಡಿಕೇರಿ ತಾಲ್ಲೂಕಿನ ಕಟ್ಟೆಮಾಡು ಶ್ರೀ ಮಹಾ ಮೃತ್ಯುಂಜಯ ದೇವಸ್ಥಾನ ಸಮಿತಿಯ ಅಧ್ಯಕ್ಷರು, ಕಾರ್ಯದರ್ಶಿ, ಪದಾಧಿಕಾರಿಗಳು ಮತ್ತು ಆಡಳಿತ ಮಂಡಳಿಯ ಸದಸ್ಯರುಗಳು ಇಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರನ್ನು ವಿರಾಜಪೇಟೆ ನಿವಾಸದಲ್ಲಿ ಭೇಟಿ ಮಾಡಿ ಚರ್ಚಿಸಿದರು. ಕಟ್ಟೆಮಾಡು ಶ್ರೀ ಮಹಾ ಮೃತ್ಯುಂಜಯ ದೇವಸ್ಥಾನದಲ್ಲಿ ಈ ಹಿಂದೆ ನಡೆದ ಘಟನೆ ಮತ್ತು ಭಾನುವಾರ ಆಡಳಿತ ಮಂಡಳಿ ನಡೆಸಿದ ತುರ್ತು ಸಭೆಯ ಕುರಿತು ಪ್ರಮುಖರು ವಿವರಿಸಿದರು. ಎಲ್ಲಾ ಗೊಂದಲಗಳಿಗೆ ಅತಿ ಶೀಘ್ರದಲ್ಲಿ ಪರಿಹಾರ ಸಿಗಬಹುದು ಎನ್ನುವ ವಿಶ್ವಾಸ ವ್ಯಕ್ತಪಡಿಸಿದರು.