ಮಡಿಕೇರಿ ಜ.6 NEWS DESK : ಗುಹ್ಯ ಅಗಸ್ತ್ಯೇಶ್ವರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಕಟ್ಟಡವನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ಶಾಸಕ ಎ.ಎಸ್.ಪೊನ್ನಣ್ಣ ಉದ್ಘಾಟಿಸಿದರು. ನೂತನ ಕಟ್ಟಡದ ವಿನ್ಯಾಸದ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ ಶಾಸಕರು, ಸಹಕಾರಿ ಸಂಘವು ಮತ್ತಷ್ಟು ಯಶಸ್ಸನ್ನು ಕಾಣುವಂತಾಗಲಿ ಎಂದು ಶುಭ ಹಾರೈಸಿದರು. ಗುಹ್ಯ ಅಗಸ್ತ್ಯೇಶ್ವರ ಸಹಕಾರಿ ಸಂಘದ ಬೆಳವಣಿಗೆ ಹಾಗೂ ಏಳಿಗೆಗೆ ಶ್ರಮಿಸುತ್ತಿರುವ ಸಂಘದ ಅಧ್ಯಕ್ಷರು ಹಾಗೂ ನಿರ್ದೇಶಕರುಗಳನ್ನು ಶ್ಲಾಘಿಸಿ, ಸಂಘದ ಸದಸ್ಯರ ಏಳಿಗೆಗೆ ಮತ್ತಷ್ಟು ಕಾರ್ಯಕ್ರಮಗಳನ್ನು ರೂಪಿಸಿ, ಕಾಳಜಿ ವಹಿಸುವಂತೆ ಕರೆ ನೀಡಿದರು. ಈ ಸಂದರ್ಭ ಸಿದ್ದಾಪುರ ವಲಯ ಕಾಂಗ್ರೆಸ್ ಅಧ್ಯಕ್ಷ ಪ್ರತೀಶ್, ಸಹಕಾರಿ ಸಂಘದ ಸಿಬ್ಬಂದಿ ವರ್ಗ, ಸಹಕಾರಿ ಸಂಘದ ಸದಸ್ಯರುಗಳು, ಗ್ರಾಮದ ಪ್ರಮುಖರು ಮತ್ತಿತರರು ಹಾಜರಿದ್ದರು.