ಮಡಿಕೇರಿ ಜ.6 NEWS DESK : ಕರ್ನಾಟಕ ರಾಜ್ಯ ಸರ್ಕಾರದ ಕಂದಾಯ ಇಲಾಖೆ ವತಿಯಿಂದ ನೂತನವಾಗಿ ರಾಜ್ಯಾದ್ಯಂತ ಕೈಗೊಳ್ಳಲಾಗಿರುವ ತಾಲ್ಲೂಕು ಕಚೇರಿ, ಸರ್ವೇ ಮತ್ತು ನೋಂದಣಿ ಇಲಾಖೆಗಳ ಎಲ್ಲಾ ಭೂ ದಾಖಲೆಗಳ ಡಿಜಿಟಲೀಕರಣ ಕಾರ್ಯಕ್ರಮದ ಅಂಗವಾಗಿ ಸೋಮವಾರಪೇಟೆ ಮತ್ತು ಕುಶಾಲನಗರ ತಾಲ್ಲೂಕಿನ ಭೂ ದಾಖಲೆಗಳ ಇ ಖಜಾನೆ ಕಾರ್ಯಕ್ರಮವನ್ನು ಸೋಮವಾರಪೇಟೆ ತಾಲ್ಲೂಕು ಕಚೇರಿಯಲ್ಲಿ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಉದ್ಘಾಟಿಸಿದರು. ಇದೇ ಸಂದರ್ಭ ಸೋಮವಾರಪೇಟೆ ತಾಲ್ಲೂಕು ಕಚೇರಿಯ ಆಹಾರ ಶಾಖೆ ಹಾಗೂ ಭೂ ದಾಖಲೆಗಳ ಇಲಾಖೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸಾರ್ವಜನಿಕರ ಕೆಲಸ ಕಾರ್ಯಗಳನ್ನು ಸೂಕ್ತವಾಗಿ ವಿಲೇವಾರಿ ಮಾಡಲು ಕ್ರಮ ಕೈಗೊಳ್ಳಬೇಕೆಂದು ಸೂಚನೆ ನೀಡಿದರು.