Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*
  • *ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*
  • *ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*
  • *ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*
  • *ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*
  • *ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*
  • *ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*
  • *ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*
  • *ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಪುನಾರಂಭಿಸಲು ಅಶ್ವಿನ್‌ ವೈಷ್ಣವ್‌ಗೆ ಯದುವೀರ್‌ ಮನವಿ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ ನೀಡಲು ಕ್ರಮ ಕೈಗೊಳ್ಳಬೇಕೆಂದು ಸಂಸದರ ಪತ್ರ*
  • *ಕೊಡವ ಭಾಷೆಗೂ ಸಾಂವಿಧಾನಿಕ ಭದ್ರತೆ ನೀಡಬೇಕು : ಸಣ್ಣ ಸಣ್ಣ ಭಾಷೆಗಳನ್ನು ಹತ್ತಿಕಿದರೆ ಏಕತೆಗೆ ದಕ್ಕೆ : ಸಿಎನ್‌ಸಿ ಪ್ರತಿಪಾದನೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಶ್ರೀ ಮಹಾ ಮೃತ್ಯುಂಜಯ ದೇವಾಲಯ ಸಮಿತಿಗೆ ಮತ್ತೆ ಫೆ.10ರವರೆಗೆ ಕಾಲಾವಕಾಶ ನೀಡಿದ ಜಿಲ್ಲಾಡಳಿತ*
ಇತ್ತೀಚಿನ ಸುದ್ದಿಗಳು

*ಶ್ರೀ ಮಹಾ ಮೃತ್ಯುಂಜಯ ದೇವಾಲಯ ಸಮಿತಿಗೆ ಮತ್ತೆ ಫೆ.10ರವರೆಗೆ ಕಾಲಾವಕಾಶ ನೀಡಿದ ಜಿಲ್ಲಾಡಳಿತ*

January 6, 20251 Min Read
Share
Facebook Twitter LinkedIn Pinterest WhatsApp Email

ಮಡಿಕೇರಿ NEWS DESK ಜ.6 : ಮಡಿಕೇರಿ ತಾಲ್ಲೂಕಿನ ಕಟ್ಟೆಮಾಡುವಿನ ಶ್ರೀ ಮಹಾ ಮೃತ್ಯುಂಜಯ ದೇವಾಲಯ ಸಮಿತಿಯು ವಸ್ತç ಸಂಹಿತೆ ಕುರಿತು ಜ.5 ರಂದು ನಡೆಸಿದ ಸಭೆಯಲ್ಲಿ ಅಂತಿಮ ನಿರ್ಧಾರ ಕೈಗೊಳ್ಳಲು ಸಾಧ್ಯವಾಗದ ಕಾರಣ ನಮಗೆ ಮತ್ತಷ್ಟು ಸಮಯಾವಕಾಶ ಬೇಕೆಂದು ಸಮಿತಿ ಕೋರಿರುವ ಹಿನ್ನೆಲೆಯಲ್ಲಿ ಫೆ.10ರವರೆಗೆ ಕಾಲಾವಕಾಶ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ತಿಳಿಸಿದ್ದಾರೆ. ದೇವಾಲಯ ಸಮಿತಿ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಇಂದು ಜಿಲ್ಲಾಧಿಕಾರಿಗಳನ್ನು ಭೇಟಿಯಾಗಿ ಜ.5ರಂದು ನಡೆದ ಸಭೆಯ ವರದಿಯನ್ನು ಮಂಡಿಸಿ ಅಂತಿಮ ನಿರ್ಧಾರ ಕೈಗೊಳ್ಳಲು ಸಾಧ್ಯವಾಗದೆ ಇರುವುದಕ್ಕೆ ಕಾರಣಗಳನ್ನು ನೀಡಿದರು. ಗೊಂದಲ ನಿವಾರಣೆಗೆ ಒಂದು ತಿಂಗಳ ಕಾಲಾವಕಾಶಬೇಕೆಂದು ಕೋರಿದ ಹಿನ್ನೆಲೆಯಲ್ಲಿ ಫೆ.10ರವರೆಗೆ ಕಾಲಾವಕಾಶ ನೀಡಲಾಗಿದೆ. ಈ ಅವಧಿಯವರೆಗೆ ಕಳೆದ ಏಳು ದಿನಗಳಿಂದ ದೇವಾಲಯ ವ್ಯಾಪ್ತಿಯಲ್ಲಿ ಇದ್ದ ಪರಿಸ್ಥಿತಿಯೇ ಮುಂದುವರೆಯಲಿದೆ. ಸೆಕ್ಷನ್ 163 ಅಡಿಯಲ್ಲಿ ವಿಧಿಸಲಾಗಿರುವ ನಿರ್ಬಂಧದ ಕುರಿತು ಪೊಲೀಸ್ ಅಧಿಕಾರಿಗಳೊಂದಿಗೆ ಚರ್ಚಿಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು. ದೇವಾಲಯದ ನಿತ್ಯ ಪೂಜೆಗೆ ಹಾಗೂ ಭಕ್ತರಿಗೆ ತೊಂದರೆಯಾಗದ ರೀತಿಯಲ್ಲಿ ದೇವಾಲಯ ವ್ಯಾಪ್ತಿಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲಾಗುವುದೆಂದು ಜಿಲ್ಲಾಧಿಕಾರಿ ಸ್ಪಷ್ಟಪಡಿಸಿದರು. ::: ಸಮಿತಿ ಅಧ್ಯಕ್ಷರ ಪ್ರತಿಕ್ರಿಯೆ ::: ಜಿಲ್ಲಾಧಿಕಾರಿಗಳಿಗೆ ವರದಿ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ದೇವಾಲಯ ಸಮಿತಿ ಅಧ್ಯಕ್ಷ ಶಶಿ ಜನಾರ್ಧನ ಅವರು, ಜ.5 ರಂದು ನಡೆದ ಸಮಿತಿ ಸಭೆಯಲ್ಲಿ ಹಬ್ಬದ ಕೊನೆಯ ದಿನ ಸಾಂಪ್ರದಾಯಿಕ ಉಡುಗೆ ತೊಡಲು ಸ್ಥಳೀಯ ಗ್ರಾಮಸ್ಥರಿಗೆ ಮಾತ್ರ ಅವಕಾಶ ನೀಡಲು ಪ್ರಸ್ತಾಪಿಸಲಾಗಿತ್ತು. ಆದರೆ ಇದಕ್ಕೆ ಸಭೆಯಲ್ಲಿದ್ದ 44 ಮಂದಿಯಲ್ಲಿ 13 ಮಂದಿ ವಿರೋಧ ವ್ಯಕ್ತಪಡಿಸಿ, ಜಿಲ್ಲೆಯ ಎಲ್ಲರಿಗೂ ಸಾಂಪ್ರದಾಯಿಕ ಉಡುಗೆ ತೊಡಲು ಅವಕಾಶ ನೀಡಬೇಕೆಂದು ಒತ್ತಾಯಿಸಿದ್ದರು. ಆದ್ದರಿಂದ ಸಭೆಯಲ್ಲಿ ವಸ್ತç ಸಂಹಿತೆ ಕುರಿತು ಅಂತಿಮ ನಿರ್ಧಾರಕ್ಕೆ ಬರಲು ಸಾಧ್ಯವಾಗಲಿಲ್ಲವೆಂದರು. ಪ್ರಸ್ತುತ ದೇವಾಲಯದಲ್ಲಿ ಈ ಹಿಂದೆ ಇದ್ದ ಕ್ರಮವನ್ನೇ ಮುಂದುವರೆಸಲು ಸಮಿತಿ ಬದ್ಧವಾಗಿದೆ. ಇದೀಗ ಜಿಲ್ಲಾಧಿಕಾರಿಗಳು ಸಮಿತಿ ಅಂತಿಮ ನಿರ್ಧಾರ ತೆಗೆದುಕೊಳ್ಳಲು ಕಾಲಾವಕಾಶ ನೀಡಿರುವ ಕ್ರಮವನ್ನು ಸ್ವಾಗತಿಸುವುದಾಗಿ ತಿಳಿಸಿದರು.

Share. Facebook Twitter Pinterest LinkedIn Tumblr Email WhatsApp
Previous Article*ಪಣಿಎರವರ ಪೊನ್ನು ಸಾವಿನ ಪ್ರಕರಣ : ಕಠಿಣ ಕ್ರಮಕ್ಕೆ ಒತ್ತಾಯಿಸಿ ಸಿಪಿಐಎಂ ಪ್ರತಿಭಟನೆ*
Next Article *ಶ್ರೀ ಮಹಾ ಮೃತ್ಯುಂಜಯ ದೇವಾಲಯ ವ್ಯಾಪ್ತಿಯಲ್ಲಿ ಜ.14 ರವರೆಗೆ ನಿರ್ಬಂಧಕಾಜ್ಞೆ

Related Posts

*ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*

February 11, 2026

*ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*

February 11, 2026

*ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*

February 11, 2026

*ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*

February 11, 2026

ಮಡಿಕೇರಿ, NEWS DESK ಫೆ.11:-ಹಲವು ದಶಕಗಳಿಂದ ಅರಣ್ಯ/ ಸರ್ಕಾರಿ ಭೂಮಿ ಅನುಭವಿಸಿಕೊಂಡು ಬಂದಿರುವ ಆದಿವಾಸಿಗಳಿಗೆ ಅರಣ್ಯ ಹಕ್ಕು ಕಾಯ್ದೆಯನ್ನು ಹೆಚ್ಚಿನ…

*ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*

February 11, 2026

*ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*

February 11, 2026

*ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*

February 11, 2026

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*

February 11, 2026

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

February 10, 2026

*ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*

February 10, 2026

*ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಪುನಾರಂಭಿಸಲು ಅಶ್ವಿನ್‌ ವೈಷ್ಣವ್‌ಗೆ ಯದುವೀರ್‌ ಮನವಿ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ ನೀಡಲು ಕ್ರಮ ಕೈಗೊಳ್ಳಬೇಕೆಂದು ಸಂಸದರ ಪತ್ರ*

February 10, 2026

*ಕೊಡವ ಭಾಷೆಗೂ ಸಾಂವಿಧಾನಿಕ ಭದ್ರತೆ ನೀಡಬೇಕು : ಸಣ್ಣ ಸಣ್ಣ ಭಾಷೆಗಳನ್ನು ಹತ್ತಿಕಿದರೆ ಏಕತೆಗೆ ದಕ್ಕೆ : ಸಿಎನ್‌ಸಿ ಪ್ರತಿಪಾದನೆ*

February 10, 2026

*ಫೆ.14 ರಂದು ಕೊಡವ ಭವನ ಉದ್ಘಾಟನೆ*

February 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.