ಸಿದ್ದಾಪುರ ಜ.7 NEWS DESK : ಮಾಲ್ದಾರೆ ಗ್ರಾಮ ಪಂಚಾಯತ್‌ಯಲ್ಲಿ ವಿಶೇಷ ಚೇತನರ ಸಮನ್ವಯ ಗ್ರಾಮಸಭೆಯು ಗ್ರಾಪಂ ಸಭಾಂಗಣದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಗ್ರಾ.ಪಂ ಅಧ್ಯಕ್ಷೆ ಮಾಲತಿ, ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ಅಂಗವಿಕಲರಿಗೆ ಸುಲಭವಾಗಿ ಲಭ್ಯವಾಗುವಂತೆ ನೋಡಿಕೊಳ್ಳಬೇಕು. ಸರ್ಕಾರದಿಂದ ಅಂಗವಿಕಲರಿಗೆ ಸ್ವಾವಲಂಬಿಗಳಾಗಿ ಬದುಕಲು ಸಾಕಷ್ಟು ಯೋಜನೆಗಳಿವೆ. ಎಲ್ಲರೂ ಸೌಲಭ್ಯಗಳ ಬಗ್ಗೆ ತಿಳಿದುಕೊಂಡು, ಅವುಗಳ ಪ್ರಯೋಜನ ಪಡೆದು ಆರ್ಥಿಕವಾಗಿ ಸದೃಢರಾಗಬೇಕು ಎಂದು ಹೇಳಿದರು. ಗ್ರಾಮ ಪಂ. ಅಭಿವೃದ್ಧಿ ಅಧಿಕಾರಿ ಚಂದ್ರಶೇಖರ್ ಮಾತನಾಡಿ, ವಿಶೇಷ ಚೇತನರಿಗೆ ಇಲಾಖೆಯಿಂದ ದೊರಕುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು. ಸಭೆಯಲ್ಲಿ ಗ್ರಾ.ಪಂ ಉಪಾಧ್ಯಕ್ಷ ಕುಞಂಣ್ಣ, ಮಾಜಿ ಅಧ್ಯಕ್ಷ ಸಮೀರ್, ಸದಸ್ಯರಾದ ಮಹಮ್ಮದ್ ಅಲಿ, ವಿದ್ಯಾ ಮತ್ತು ಗ್ರಾ.ಪಂ ಸಿಬ್ಬಂದಿಗಳು ಹಾಜರಿದ್ದರು.