ಮಡಿಕೇರಿ ಜ.7 NEWS DESK : ಇತ್ತೀಚಿಗೆ ನಿಧನರಾದ ಸಿದ್ದಾಪುರ ಭಾಗದ ಡಿಸಿಸಿ ಸದಸ್ಯ ಹಾಗೂ ಹಿರಿಯ ಕಾಂಗ್ರೆಸ್ ಮುಖಂಡ ದಿವಂಗತ ಮೂಸ ಅವರ ಮನೆಗೆ ಮುಖ್ಯಮಂತ್ರಿಗಳ ಕಾನೂನು ಸಲಹಾಗಾರ ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ ಭೇಟಿ ನೀಡಿ ಕುಟುಂಬಸ್ಥರಿಗೆ ಸಂತ್ವಾನ ಹೇಳಿದರು. ಮಕ್ಕಳ ವಿದ್ಯಾಭ್ಯಾಸಕ್ಕೆ ಯಾವುದೇ ಸಹಾಯದ ಅಗತ್ಯವಿದ್ದಲ್ಲಿ ಜಿಲ್ಲಾ ಕಾಂಗ್ರೆಸ್ ಪಕ್ಷವು ಸದಾ ನಿಮ್ಮೊಂದಿಗಿದೆ ಎಂಬ ಭರವಸೆ ನೀಡಿದರು. ಇದೇ ಸಂದರ್ಭ ಕುಟುಂಬಸ್ಥರಿಗೆ ಜಿಲ್ಲಾ ಕಾಂಗ್ರೆಸ್ ವತಿಯಿಂದ ಚೆಕ್ ಹಸ್ತಾಂತರಿಸಲಾಯಿತು. ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಧರ್ಮಜ ಉತ್ತಪ್ಪ, ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಂಜಿ ಪೂಣ್ಣಚ್ಚ, ಅಲ್ಪಸಂಖ್ಯಾತ ಘಟಕ ಅಧ್ಯಕ್ಷ ಹನೀಫ್, ಕೆಡಿಪಿ ವಿರಾಜಪೇಟೆ ಸದಸ್ಯ ಕೋಲುಮಂಡ ರಫೀಕ್ ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರುಗಳು ಹಾಜರಿದ್ದರು.