ಬೆಂಗಳೂರು NEWS DESK ಜ.7 : ರಾಜ್ಯ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರನ್ನು ಭೇಟಿ ಮಾಡಿದ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ವಿವಿಧ ಅಭಿವೃದ್ಧಿ ಕಾರ್ಯಗಳ ಕುರಿತು ಸಮಾಲೋಚನೆ ನಡೆಸಿದರು. ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ನಂತರ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರನ್ನು ಸಂಸದರು ಭೇಟಿ ಮಾಡಿದರು. ಮೈಸೂರಿನಲ್ಲಿ ಬಾಕಿ ಉಳಿದಿರುವ ಅಭಿವೃದ್ಧಿ ಯೋಜನೆಗಳು ಹಾಗೂ ಮುಂಬರುವ ಯೋಜನೆಗಳ ಕುರಿತು ಮುಖ್ಯ ಕಾರ್ಯದರ್ಶಿಗಳಿಗೆ ಮನವರಿಕೆ ಮಾಡಿಕೊಟ್ಟರು. ಮೈಸೂರಿನ ಎಲ್ಲಾ ಯೋಜನೆಗಳಿಗೂ ಸೂಕ್ತ ನೆರವು, ಬೆಂಬಲ ಒದಗಿಸಲಾಗುವುದು ಎಂದು ಮುಖ್ಯಕಾರ್ಯದರ್ಶಿಗಳು ಇದೇ ಸಂದರ್ಭ ಭರವಸೆ ನೀಡಿದ್ದಾರೆ ಎಂದು ಸಂಸದರು ತಿಳಿಸಿದರು.