ನಾಪೋಕ್ಲು ಜ.8 NEWS DESK : ಪಟ್ಟಣದಲ್ಲಿ ವಾಹನ ದಟ್ಟಣೆ ನಿಯಂತ್ರಿಸುವ ಸಲುವಾಗಿ ಕಾರ್ಯಯೋಜನೆಗಳನ್ನು ಹಮ್ಮಿಕೊಳ್ಳಲು ಜ.8 ರಂದು ಪಟ್ಟಣದ ಅಂಗಡಿ ಮಾಲೀಕರ ತುರ್ತು ಸಭೆಯನ್ನು ಕರೆಯಲಾಗಿದೆ ಎಂದು ಠಾಣಾಧಿಕಾರಿ ಮಂಜುನಾಥ್ ತಿಳಿಸಿದ್ದಾರೆ. ನಾಪೋಕ್ಲು ಪೊಲೀಸ್ ಠಾಣೆಯಲ್ಲಿ ಬೆಳಗ್ಗೆ 10.30 ಗಂಟೆಗೆ ಅಂಗಡಿ ಮಾಲೀಕರ ಸಭೆ ನಡೆಯಲಿದ್ದು, ಎಲ್ಲ ಅಂಗಡಿ ಮಾಲೀಕರು ಸಮಯಕ್ಕೆ ಸರಿಯಾಗಿ ಆಗಮಿಸಿ ಸೂಕ್ತ ಸಲಹೆ ಸೂಚನೆಗಳನ್ನು ನೀಡುವಂತೆ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.
ವರದಿ : ದುಗ್ಗಳ ಸದಾನಂದ.