ನಾಪೋಕ್ಲು ಜ.7 NEWS DESK : ಸಿ ಮತ್ತು ಡಿ ವರ್ಗದ ಜಮೀನನ್ನು ಮೀಸಲು ಅರಣ್ಯವೆಂದು ಘೋಷಿಸುವ ವಿಷಯದ ಕುರಿತಾಗಿ ಚರ್ಚಿಸಲು ಕುಂಜಿಲ ಕಕ್ಕಬೆ ಗ್ರಾಮ ಪಂಚಾಯಿತಿಯಲ್ಲಿ ವಿಶೇಷ ಗ್ರಾಮ ಸಭೆ ನಡೆಯಿತು. ಕುಂಜಿಲ ಕಕ್ಕಬೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಂಜಿಲ, ಯವಕಪಾಡಿ, ನಾಲಡಿ ಮತ್ತು ಮರಂದೋಡ ಗ್ರಾಮಗಳಲ್ಲಿ ಈಗಾಗಲೇ ವಾಸದ ಮನೆಯನ್ನು ನಿರ್ಮಿಸಿರುವ, ಕೃಷಿ ಮಾಡಿಕೊಂಡು ಅನುಭವ ಸ್ವಾಧೀನದಲ್ಲಿರುವ ಜಾಗವನ್ನು ಹೊರತುಪಡಿಸಿ, ಜಮ್ಮಾ ಮಲೆಗೆ ಹೋಗುವ ಬಂಡಿ ದಾರಿ, ಕುಡಿಯುವ ನೀರಿನ ಮೂಲ, ದೇವರ ಸ್ಥಾನಗಳಿಗೆ ಹೋಗುವ ದಾರಿಗೆ ಅಡ್ಡಿ ಪಡಿಸದಂತೆ ನಿರ್ಣಯ ಕೈಗೊಂಡು ಸಂಬಂಧಿಸಿದ ಇಲಾಖೆಯ ಅಧಿಕಾರಿವರಿಗೆ ಕಳುಹಿಸಿಕೊಡುವಂತೆ ತೀರ್ಮಾನಿಸಿದರು. ಪಂಚಾಯಿತಿ ಅಧ್ಯಕ್ಷೆ ಪಿ.ಎಲ್.ಶಿಲ್ಪ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಬಿ.ವೈ.ಅಶೋಕ್ ಕುಮಾರ್, ಕಂದಾಯ ಪರಿವೀಕ್ಷಕ ರವಿ ಕುಮಾರ್, ಭಾಗಮಂಡಲ ವಲಯ ಅರಣ್ಯಾಧಿಕಾರಿ ಗ್ರಾಮಸ್ಥರ ಕೆಲ ಪ್ರಶ್ನೆಗಳಿಗೆ ಉತ್ತರಿಸಿದರು. ಸಭೆಯಲ್ಲಿ ಪಂಚಾಯಿತಿ ಉಪಾಧ್ಯಕ್ಷೆ ಬೀನಾ ಸುಚಿತ್ರ, ಸದಸ್ಯರಾದ ಚೋಯಮಾಡಂಡ ಹರಿ ಮೊಣ್ಣಪ್ಪ, ಲೀಲಾವತಿ, ನಂಬುಡಮಂಡ ಶೈಲ, ಭರತ್ ಚಂದ್ರ ದೇವಯ್ಯ, ಕುಂಡಂಡ ರಜಾಕ್, ಕೋಡಿಮಣಿಯಂಡ ಬೋಪಣ್ಣ, ಸಂಪನ್ ಅಯ್ಯಪ್ಪ, ಸೇರಿದಂತೆ ಅರಣ್ಯ ಇಲಾಖೆ, ಕಂದಾಯ ಇಲಾಖೆ ಭೂ ಮಾಪನ ಇಲಾಖೆ, ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿಗಳು, ಗ್ರಾಮಸ್ಥರು ಪಾಲ್ಗೊಂಡಿದ್ದರು.
ವರದಿ : ದುಗ್ಗಳ ಸದಾನಂದ.