ಮಡಿಕೇರಿ ಜ.7 NEWS DESK : ಕನ್ನಡ ನಾಡಿನ ಹಿರಿಯ ಸಾಹಿತಿ ಶಿಶು ಸಾಹಿತ್ಯದ ಪಿತಾಮಹ “ಎಲ್ಲಿ ಭೂರಮೆ ದೇವ ಸನ್ನಿಧಿ ಬಯಸಿ ಭಿಮ್ಮನೆ ಬಂದಳೊ” ಕೊಡಗಿನ ನಾಡಗೀತೆಯ ರಚನಾಕಾರ ಮಡಿಕೇರಿ ಸೆಂಟ್ರಲ್ ಹೈ ಸ್ಕೂಲ್ ನಲ್ಲಿ ಸ್ವಾತಂತ್ರ್ಯ ಪೂರ್ವದಲ್ಲಿ ಏಕೈಕ ಭಾರತೀಯ ಕನ್ನಡ ಮುಖ್ಯೋಪಾಧ್ಯಾಯರಾಗಿ ಸೇವೆ ಸಲ್ಲಿಸಿದ ಬ್ರಿಟಿಷರ ಕಾಲದಲ್ಲಿ ಕೊಡಗಿನ ಶಾಲಾ ಇನ್ಸ್ಪೆಕ್ಟರ್ ಆಗಿ ಸೇವೆ ಸಲ್ಲಿಸಿದ ಅಪ್ರತಿಮಾ ಸಂಘಟಕ, ದಿ. ಪಂಜೆ ಮಂಗೇಶರಾಯರ 150ನೇ ವರ್ಷಾಚರಣೆ ಕಾರ್ಯಕ್ರಮಗಳನ್ನು ಆಯೋಜಿಸುವ ಸಲುವಾಗಿ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಮಡಿಕೇರಿಯಲ್ಲಿ ಪೂರ್ವಭಾವಿ ಸಭೆ ನಡೆಯಿತು. ಸಭೆಯಲ್ಲಿ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಪಿ.ಕೇಶವ ಕಾಮತ್ ಪ್ರಾಸ್ತಾವಿಕವಾಗಿ ಮಾತನಾಡಿ, ಕಾರ್ಯಕ್ರಮ ನಡೆಸುವ ಸ್ಥಳ, ನಡೆಸುವ ರೀತಿಯ ಬಗ್ಗೆ ಸಲಹೆ ಸೂಚನೆ ನೀಡುವಂತೆ ಉಪಸ್ಥಿತರಿದ್ದವರಲ್ಲಿ ಕೋರಿದರು. ಸಭೆಯಲ್ಲಿ ಉಪಸ್ಥಿತರಿದ್ದ ಗೌರವ ಕಾರ್ಯದರ್ಶಿ ಮುನೀರ್ ಅಹಮದ್, ಸಾಹಿತಿಗಳಾದ ಡಾ. ಜಿ.ಸೋಮಣ್ಣ, ಮಡಿಕೇರಿ ತಾಲ್ಲೂಕು ನಿಕಟಪೂರ್ವ ಅಧ್ಯಕ್ಷ ಅಂಬೇಕಲ್ ನವೀನ್, ಶಿಕ್ಷಣ ಇಲಾಖೆಯ ಗುರುರಾಜ್, ಸರ್ಕಾರಿ ಪ್ರಥಮ ದರ್ಜೆ ಪದವಿ ಕಾಲೇಜಿನ ಪ್ರಾಂಶುಪಾಲರಾದ ಪ್ರಸನ್ನ ವೆಂಕಟೇಶ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ್ ಕಾರ್ಯಕ್ರಮದ ಕುರಿತು ಸಲಹೆ ನೀಡಿದರು. ಕಾರ್ಯಕ್ರಮದ ಸ್ವಾಗತ ಸಮಿತಿಯ ಗೌರವಾಧ್ಯಕ್ಷ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಮಂಥರ್ ಗೌಡ ಮತ್ತು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರನ್ನು ಕೋರಿಕೊಂಡು ಜಿಲ್ಲಾಧಿಕಾರಿ, ಮುಖ್ಯ ಕಾರ್ಯನಿರ್ವಣಧಿಕಾರಿ, ಪೊಲೀಸ್ ಅಧೀಕ್ಷಕರು ಪೋಷಕರಾಗಿಯೂ ಶಿಕ್ಷಣ ಇಲಾಖೆಯ ಮುಖ್ಯಸ್ಥರನ್ನು ಕನ್ನಡ ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರನ್ನು ವಿಶೇಷ ಅಹ್ವಾನಿತರಾಗಿ ಮತ್ತು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿ ತಾಲೂಕು ಹೋಬಳಿ ಅಧ್ಯಕ್ಷರುಗಳು ಜಿಲ್ಲೆಯ ಇತರ ಸಂಘ-ಸಂಸ್ಥೆಗಳ ಅಧ್ಯಕ್ಷರುಗಳನ್ನು ಒಳಗೊಂಡ ಸಮಿತಿ ರಚಿಸುವಂತೆ ತೀರ್ಮಾನಿಸಲಾಯಿತು. ಕಾರ್ಯಕ್ರಮವನ್ನು ಪಂಜೆ ಮಂಗೇಶರಾಯರ ಕಾರ್ಯಕ್ಷೇತ್ರವಾಗಿದ್ದ ಸೆಂಟ್ರಲ್ ಹೈಸ್ಕೂಲ್ ಅಂದರೆ ಈಗಿನ ಜೂನಿಯರ್ ಕಾಲೇಜ್ ಆವರಣದಲ್ಲಿ ಕಾರ್ಯಕ್ರಮ ನಡೆಸುವಂತೆ ತೀರ್ಮಾನಿಸಲಾಯಿತು. ಫೆ.7 ರಂದು ಕಾರ್ಯಕ್ರಮ ನಡೆಸುವಂತೆ ತಾತ್ಕಾಲಿಕ ದಿನ ನಿಗದಿಗೊಳಿಸಲಾಯಿತು. ಕಾರ್ಯಕ್ರಮದಲ್ಲಿ ಪಂಜೆಯವರ ಬದುಕು, ಬರಹ, ಸಾಹಿತ್ಯ, ನಾಟಕ, ಕವನ ಇವುಗಳ ಕುರಿತು ರಾಜ್ಯದ ಹಿರಿಯ ಸಾಹಿತಿಗಳಿಂದ ವಿಚಾರಗೋಷ್ಠಿ ನಡೆಸುವಂತೆಯೂ, ಶಾಲಾ ವಿದ್ಯಾರ್ಥಿಗಳಿಂದ ಪಂಜೆಯವರ ಹಾಡುಗಳ ನೃತ್ಯರೂಪಕ ಮತ್ತು ಗೀತ ಗಾಯನ ಕಾರ್ಯಕ್ರಮ ನಡೆಸುವಂತೆ ತೀರ್ಮಾನಿಸಲಾಯಿತು. ಸಭೆಯಲ್ಲಿಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ರೇವತಿ ರಮೇಶ್, ಗೌರವ ಕೋಶಾಧಿಕಾರಿ ಎಸ್.ಎಸ್.ಸಂಪತ್ ಕುಮಾರ್, ಮಡಿಕೇರಿ ತಾಲೂಕು ಘಟಕದ ಅಧ್ಯಕ್ಷರಾದ ಕಡ್ಲೇರ ತುಳಸಿ ಮೋಹನ್, ಮೂರ್ನಾಡು ಹೋಬಳಿ ಅಧ್ಯಕ್ಷರಾದ ಈರಮಂಡ ಹರಿಣಿ ವಿಜಯ್, ನಿರ್ದೇಶಕರುಗಳಾದ ಕೆ.ಟಿ.ಬೇಬಿ ಮ್ಯಾಥ್ಯು, ಸುನೀತಾ ಪ್ರೀತು, ಮಡಿಕೇರಿ ತಾಲೂಕು ನಿಕಟ ಪೂರ್ವ ಅಧ್ಯಕ್ಷ ಅಂಬೆಕಲ್ ನವೀನ್, ಅಹಿಂದ ಒಕ್ಕೂಟದ ಅಧ್ಯಕ್ಷ ಟಿ.ಎಂ ಮುದ್ದಯ್ಯ ಶಿಕ್ಷಣ ಇಲಾಖೆಯ ಕೆ.ಪಿ.ಗುರುರಾಜ್, ಎಂ.ಕೃಷ್ಣಪ್ಪ, ಸರ್ಕಾರಿ ಪ್ರೌಢಶಾಲಾ ಮುಖ್ಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಶಶಿಕಲಾ, ಕ್ರಸೆಂಟ್ ಶಾಲೆಯ ಅಧ್ಯಾಪಕ ನಾಗರಾಜ ಶೆಟ್ಟಿ, ಜಾನ್ಸನ್ ಕೆ ಎ ಮುಖ್ಯೋಪಾಧ್ಯಾಯರು ಸಂತಮೈಕಲರ ಪ್ರೌಢಶಾಲೆ, ಶ್ರೀಮತಿ ಆಶಾ ಎಚ್ ಕೊಡಗು ವಿದ್ಯಾಲಯ ಶಿಕ್ಷಕರು. ಅನುಸೂಯ ಬ್ಲಾಸಂ ಶಾಲಾ ಮುಖ್ಯೋಪಾಧ್ಯಾಯರು, ಸುನೀತಾ ಪ್ರೀತು ಲಿಟಲ್ ಫ್ಲವರ್ ಶಾಲೆ. ಶ್ರೀಮತಿ ಪೂರ್ಣಿಮಾ ಮತ್ತು ಶ್ರೀಮತಿ ಮುಕ್ತಾಕ್ಷಿ ಪದವಿಪೂರ್ವ ಕಾಲೇಜ್ ಉಪನ್ಯಾಸಕರು, ಮಹದೇವ್ ಪೇಟೆ ಶಾಲೆಯ ಮುಖ್ಯ ಶಿಕ್ಷಕಿ ಪ್ರಪುಲ್ಲ, ಜಿಟಿ ರಸ್ತೆ ಶಾಲೆಯ ಮುಖ್ಯ ಶಿಕ್ಷಕಿ ರೋಜಿ ಕ್ಷೇವಿಯರ್, ನರಲ್ ತಿಮ್ಮಯ್ಯ ಶಾಲಾ ಶಿಕ್ಷಕ ಹೆಚ್.ಎನ್.ಈರಪ್ಪ, ಮಡಿಕೇರಿ ಸರಕಾರಿ ಪ್ರೌಢಶಾಲೆ ಶಿಕ್ಷಕಿ ಎಂ.ಡಿ.ಸೌಮ್ಯ, ಜಿಎಂಪಿ ಶಾಲೆಯ ಮುಖ್ಯ ಶಿಕ್ಷಕಿ ಎಚ್.ಕೆ.ಸುಶೀಲ, ಸಂತ ಜೋಷಪರ ಶಾಲಾ ಶಿಕ್ಷಕಿ ಶೈಲ ಹಾಗೂ ಸಾಹಿತ್ಯ ಪರಿಷತ್ ಸಿಬ್ಬಂದಿ ರೇಣುಕಾ ಉಪಸ್ಥಿತರಿದ್ದರು.