ಬೆಂಗಳೂರು NEWS DESK ಜ.7 : ಅರಣ್ಯ ಅಪರಾಧಗಳಿಗೆ ಇನ್ನು ಮುಂದೆ ಗರುಡಾಕ್ಷಿ ಅಸ್ತç ಪ್ರಯೋಗವಾಗಲಿದೆ. ಗರುಡಾಕ್ಷಿ ಆನ್‌ಲೈನ್ ಎಫ್ ಐಆರ್ ವ್ಯವಸ್ಥೆಗೆ ಅರಣ್ಯ, ಜೀವಿಶಾಸ್ತç ಮತ್ತು ಪರಿಸರ ಖಾತೆ ಸಚಿವ ಈಶ್ವರ ಬಿ.ಖಂಡ್ರೆ ಇಂದು ಚಾಲನೆ ನೀಡಿದರು. ವೈಲ್ಡ್ ಲೈಫ್ ಟ್ರಸ್ಟ್ ಆಫ್ ಇಂಡಿಯಾ ಸಹಯೋಗದೊಂದಿಗೆ ಗರುಡಾಕ್ಷಿ ಆನ್‌ಲೈನ್ ಎಫ್ ಐಆರ್ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಲಾಗಿದೆ. ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಅರಣ್ಯ ಅಪರಾಧ ತಡೆಯಲು, ತಪ್ಪಿತಸ್ಥರಿಗೆ ಶಿಕ್ಷೆ ಆಗುವುದನ್ನು ಖಾತ್ರಿ ಪಡಿಸಲು ಹಾಗೂ ಆ ಮೂಲಕ ಅರಣ್ಯ ಮತ್ತು ವನ್ಯಜೀವಿ ಅಪರಾಧಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಈ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ ಎಂದು ಅರಣ್ಯ ಸಚಿವರು ತಿಳಿಸಿದರು. ಆಧುನಿಕ ವ್ಯವಸ್ಥೆಗೆ ಅನುಗುಣವಾಗಿ ಅರಣ್ಯ ಇಲಾಖೆ ಬದಲಾಗುತ್ತಿದ್ದು, ಅರಣ್ಯ ಒತ್ತುವರಿ, ಅಕ್ರಮ ಮರ ಕಡಿತಲೆ, ಕಳ್ಳಬೇಟೆ, ಅತಿಕ್ರಮ ಪ್ರವೇಶ ಇತ್ಯಾದಿ ಅರಣ್ಯ ಅಪರಾಧಗಳಿಗೆ ಇನ್ನು ಮುಂದೆ ಗರುಡಾಕ್ಷಿ ಅಸ್ತç ಪ್ರಯೋಗಿಸಲಾಗುವುದು. ಪೊಲೀಸ್ ಇಲಾಖೆಯಲ್ಲಿ ಇರುವ ರೀತಿಯಲ್ಲೇ ಅರಣ್ಯ ಇಲಾಖೆಯಲ್ಲೂ ಆನ್ ಲೈನ್ ಎಫ್.ಐ.ಆರ್. ವ್ಯವಸ್ಥೆ ಜಾರಿಗೆ ತರಲು ತಂತ್ರಾAಶ ರೂಪಿಸುವಂತೆ 2023ರಲ್ಲಿಯೇ ಸೂಚನೆ ನೀಡಿದ್ದು, ಇಂದು ಕಾರ್ಯರೂಪಕ್ಕೆ ಬಂದಿದೆ. ಈ ತಂತ್ರಾAಶ ಅರಣ್ಯ ಮತ್ತು ವನ್ಯಜೀವಿ ಸಂರಕ್ಷಣಾ ಕಾನೂನುಗಳ ಅಡಿಯಲ್ಲಿ ಅರಣ್ಯ ಅಪರಾಧ ಪ್ರಕರಣಗಳನ್ನು ನಿರ್ವಹಿಸಲು ಮತ್ತು ಪರಿಣಾಮಕಾರಿಯಾಗಿ ಮೇಲ್ವಿಚಾರಣೆ ಮಾಡಲು ಸಹಕಾರಿಯಾಗಲಿದೆ ಎಂದು ತಿಳಿಸಿದರು.