ಮಡಿಕೇರಿ ಜ.7 NEWS DESK : ಕಾನೂನು ಸುವ್ಯವಸ್ಥೆ ಮತ್ತು ಆಂತರಿಕಾ ಭದ್ರತೆ ದೃಷ್ಟಿಯಿಂದ ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ಮಡಿಕೇರಿ ಹೋಬಳಿಯ, ಎಸ್.ಕಟ್ಟೆಮಾಡು ಗ್ರಾಮದ ಶ್ರೀ ಮಹಾಮೃತ್ಯುಂಜಯ ದೇವಸ್ಥಾನದ ಸುತ್ತಮುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿನ ಪ್ರದೇಶವನ್ನು ಜ.7 ರ ಬೆಳಗ್ಗೆ 6 ಗಂಟೆಯಿಂದ ಜ.14 ರ ಬೆಳಗ್ಗೆ 10 ಗಂಟೆಯವರೆಗೆ ವಿಸ್ತರಿಸಿ 5 ಕ್ಕಿಂತ ಹೆಚ್ಚು ಜನ ಗುಂಪು ಸೇರದಂತೆ ಪ್ರತಿಭಟನೆ, ಮೆರವಣಿಗೆ, ರ್ಯಾಲಿ, ಜಾಥ ಪ್ರಚೋದನಾತ್ಮಕ ಘೋಷಣೆ ಕೂಗದಂತೆ ನಿರ್ಬಂಧಿತ ಪ್ರದೇಶ ಎಂದು ಘೋಷಿಸಿ ಮಡಿಕೇರಿ ಉಪವಿಭಾಗದ ಹಿರಿಯ ಉಪ ವಿಭಾಗಾಧಿಕಾರಿ ಹಾಗೂ ಉಪ ವಿಭಾಗೀಯ ದಂಡಾಧಿಕಾರಿ ವಿನಾಯಕ್ ನರ್ವಡೆ ಆದೇಶಿಸಿದ್ದಾರೆ.