ಮಡಿಕೇರಿ ಜ.8 NEWS DESK : ಮಡಿಕೇರಿಯ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜು ಮೈದಾನದಲ್ಲಿ ಮಾರ್ಚ್ ಹಾಗೂ ಏಪ್ರಿಲ್ ತಿಂಗಳಿನಲ್ಲಿ ನಡೆಯಲಿರುವ ಕೊಡವ ಕುಟುಂಬಗಳ ನಡುವಿನ ಹಾಕಿ ಉತ್ಸವದ 25ನೇ ವರ್ಷದ ಪಂದ್ಯಾವಳಿಯ ಜವಾಬ್ದಾರಿ ವಹಿಸಿರುವ ಮುದ್ದಂಡ ಕುಟುಂಬಸ್ಥರು ಹಾಗೂ ಪ್ರಮುಖರು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಭೇಟಿಯಾಗಿ ಜ.11ರಂದು ಮಡಿಕೇರಿಯಲ್ಲಿ ನಡೆಯಲಿರುವ ಮುದ್ದಂಡ ಕಪ್ ತಯಾರಿಗೆ ಲೋಗೋ ಬಿಡುಗಡೆ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಭಾಗವಹಿಸಲು ಆಮಂತ್ರಣ ನೀಡಿˌ ಹಾಕಿ ಉತ್ಸವ ಯಶಸ್ವಿಯಾಗಿ ಜರುಗಲು ಅಗತ್ಯ ಸಹಕಾರ ಹಾಗೂ ಬೆಂಬಲ ನೀಡಬೇಕೆಂದು ಮನವಿ ಮಾಡಿದರು.