ಮೈಸೂರು ಜ.8 NEWS DESK : ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ವಿಶ್ವ ದರ್ಜೆಯ ಉತ್ಕೃಷ್ಟಮಟ್ಟದ ತಾರಾಲಯ ಕಟ್ಟಡ ಕಾಮಗಾರಿಯನ್ನು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಪರಿಶೀಲಿಸಿದರು. ಈ ಸಂದರ್ಭ ಭಾರತಿಯ ಜನತಾ ಪಕ್ಷದ ಪ್ರಧಾನ ಕಾರ್ಯದರ್ಶಿ ಬಿ.ಎಮ್. ರಾಘು ಸೇರಿದಂತೆ ಪಕ್ಷದ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.