ಮಡಿಕೇರಿ ಜ.8 NEWS DESK : ಶಿವಮೊಗ್ಗ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಆಶ್ರಯದಲ್ಲಿ ಮಂಡ್ಯ ಜಿಲ್ಲೆಯ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಸಮ್ಮೇಳನ ಸಭಾಂಗಣದಲ್ಲಿ ಜ.16 ರಂದು ನಡೆಯಲಿರುವ 20ನೇ ರಾಜ್ಯಮಟ್ಟದ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದ್ದು, ರಾಜ್ಯದ ಎಲ್ಲಾ ಜಿಲ್ಲೆಗಳಿಂದ ಸಾಹಿತ್ಯ ಚಟುವಟಿಕೆಯಲ್ಲಿ ತೊಡಗಿರುವ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಇಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ. ಕಥೆ, ಕವನ, ಕಾದಂಬರಿ ಪ್ರಕಟಗೊಳಿಸಿರುವ 17 ವಯಸ್ಸಿನ ಒಳಗಿನ ವಿದ್ಯಾರ್ಥಿಗಳು ಈ ಸಮ್ಮೇಳನದಲ್ಲಿ ಭಾಗವಹಿಸಬಹುದಾಗಿದೆ. ಪುಸ್ತಕಗಳ ಪ್ರಕಟಣೆ ಅಥವಾ ಪತ್ರಿಕೆಗಳಲ್ಲಿ ಲೇಖನಗಳು ಬರೆದಿರುವ ವಿದ್ಯಾರ್ಥಿಗಳು ಕೂಡ ಭಾಗವಹಿಸಬಹುದಾಗಿದೆ ಎಂದು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಪಿ.ಕೇಶವ ಕಾಮತ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇಪ್ಪತ್ತನೆಯ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡದ ಎಲ್ಲಾ ಸಾಹಿತ್ಯ ಬರೆಯಲು ತೊಡಗಿರುವ ವಿದ್ಯಾರ್ಥಿಗಳಿಗೆ ಭಾಗವಹಿಸಲು ಅವಕಾಶವಿದೆ. ವಿದ್ಯಾರ್ಥಿಗಳು ತಮ್ಮ ಹೆಸರು, ವಿಳಾಸ, ದೂರವಾಣಿ ಸಂಖ್ಯೆ. ಓದುವ ತರಗತಿ, ಶಾಲೆ, ಪುಸ್ತಕ ಪ್ರಕಟವಾಗಿದ್ದರೆ ಮಾಹಿತಿ, ಇದುವರೆಗೆ ಯಾವುದೇ ಕಾರ್ಯಕ್ರಮಗಳಲ್ಲಿ ಭಾಗವಹಿ ಪ್ರತಿಭೆ ಅನಾವರಣ ಗೊಂಡಿದ್ದರೆ ಆ ಎಲ್ಲಾ ಮಾಹಿತಿಯೊಂದಿಗೆ ತಕ್ಷಣ ಕಳುಹಿಸಬಹುದಾಗಿದೆ. ಸಂಪರ್ಕಸಬೇಕಾದ ವಿಳಾಸ ಮತ್ತು ದೂರವಾಣಿ ಸಂಖ್ಯೆ-ಡಿ. ಮಂಜುನಾಥ, ಅಧ್ಯಕ್ಷರು, ಕನ್ನಡ ಸಾಹಿತ್ಯ ಪರಿಷತ್ತು, ಜಿಲ್ಲಾಧಿಕಾರಿಗಳ ಕಚೇರಿ ಆವರಣ, ಶಿವಮೊಗ್ಗ, ದೂರವಾಣಿ : 9449552795 ಇವರಿಗೆ ತಲುಪಿಸಲು ಕೋರುತ್ತೇವೆ. ಭಾಗವಹಿಸುವವರಿಗೆ ಊಟ, ತಿಂಡಿ, ವಸತಿ ವ್ಯವಸ್ಥೆ ಮಾಡಲಾಗುವುದು. ಸಂಪರ್ಕ ಮಾಡಲು ಕೋರಿದೆ.