Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಸಾರ್ವಜನಿಕರ ಸಮಸ್ಯೆ ಸಕಾಲದಲ್ಲಿ ಇತ್ಯರ್ಥಪಡಿಸಿ : ಲೋಕಾಯುಕ್ತ ಉಪ ಅಧೀಕ್ಷಕ ಕೆ.ಸಿ.ಪ್ರಕಾಶ್ ಸೂಚನೆ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸಾರ್ವಜನಿಕರ ಸಮಸ್ಯೆ ಸಕಾಲದಲ್ಲಿ ಇತ್ಯರ್ಥಪಡಿಸಿ : ಲೋಕಾಯುಕ್ತ ಉಪ ಅಧೀಕ್ಷಕ ಕೆ.ಸಿ.ಪ್ರಕಾಶ್ ಸೂಚನೆ

ಜನವರಿ 8, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ಜ.8 NEWS DESK : ಸಾರ್ವಜನಿಕರ ಸಮಸ್ಯೆಗಳನ್ನು ಸಕಾಲದಲ್ಲಿ ಇತ್ಯರ್ಥಪಡಿಸಲು ಅಧಿಕಾರಿಗಳು ಶ್ರಮಿಸುವಂತೆ ಲೋಕಾಯುಕ್ತ ಪೊಲೀಸ್ ಉಪ ಅಧೀಕ್ಷಕರಾದ ಕೆ.ಸಿ.ಪ್ರಕಾಶ್ ಅವರು ಸೂಚಿಸಿದ್ದಾರೆ. ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ಕರ್ನಾಟಕ ಲೋಕಾಯುಕ್ತ ಕಾಯ್ದೆಯಡಿ ದೂರು ಅರ್ಜಿ ಸ್ವೀಕರಿಸಿ ಅವರು ಮಾತನಾಡಿದರು. ಎಲ್ಲಾ ಕಚೇರಿಗಳಲ್ಲಿ ಲೋಕಾಯುಕ್ತ ಕಾಯ್ದೆಯ ಮಾಹಿತಿ ಫಲಕವನ್ನು ಕಡ್ಡಾಯವಾಗಿ ಅಳವಡಿಸಬೇಕು. ಯಾವುದೇ ಕಾರಣಕ್ಕೂ ವಿಳಂಬ ಮಾಡಬಾರದು ಎಂದು ಸೂಚಿಸಿದರು. ಸರ್ಕಾರಿ ಅಧಿಕಾರಿಗಳು ಸಾರ್ವಜನಿಕ ಸೇವೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು, ಉತ್ತರಾದಾಯಿತ್ವ ಹೊಂದಿರಬೇಕು ಎಂದು ಕಿವಿಮಾತು ಹೇಳಿದರು. ಕಂದಾಯ, ಪಂಚಾಯತ್ ರಾಜ್, ಸ್ಥಳೀಯ ಸಂಸ್ಥೆಗಳು ಸೇರಿದಂತೆ ವಿವಿಧ ಇಲಾಖೆ ವ್ಯಾಪ್ತಿಯಲ್ಲಿ ಸಾರ್ವಜನಿಕರು ತಮ್ಮ ಕೆಲಸಕ್ಕಾಗಿ ಭೇಟಿ ನೀಡುತ್ತಾರೆ. ಆದ್ದರಿಂದ ಸಾರ್ವಜನಿಕರಿಗೆ ಸ್ಪಂದಿಸಿ ಕರ್ತವ್ಯ ನಿರ್ವಹಿಸುವುದು ಅಧಿಕಾರಿ ಮತ್ತು ಸಿಬ್ಬಂದಿಗಳ ಜವಾಬ್ದಾರಿಯಾಗಿದೆ ಎಂದು ಹೇಳಿದರು. ಸಾರ್ವಜನಿಕವಾಗಿ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಕರ್ತವ್ಯ ನಿಷ್ಠೆಯಿಂದ ಕಾರ್ಯ ನಿರ್ವಹಿಸಿದಾಗ ಹಲವು ಸಮಸ್ಯೆಗಳನ್ನು ಇತ್ಯರ್ಥಪಡಿಸಬಹುದು ಎಂದು ಹೇಳಿದರು. ವಿದ್ಯಾರ್ಥಿ ನಿಲಯಗಳಲ್ಲಿ ಸ್ವಚ್ಛತೆಗೆ ಹೆಚ್ಚಿನ ಒತ್ತು ನೀಡಬೇಕು. ಗುಣಮಟ್ಟದ ಆಹಾರ ವಿತರಿಸಬೇಕು. ಸುಭದ್ರತೆಯತ್ತ ಗಮನಹರಿಸಬೇಕು. ರಿಜಿಸ್ಟ್ರಾರ್ ನಿರ್ವಹಿಸಬೇಕು. ಕುಡಿಯಲು ಶುದ್ಧ ನೀರು ಮತ್ತು ಸ್ನಾನಕ್ಕೆ ಬಿಸಿನೀರು ವ್ಯವಸ್ಥೆ ಮಾಡಬೇಕು ಎಂದು ತಾಲ್ಲೂಕು ಮಟ್ಟದ ಅಧಿಕಾರಿಗಳಿಗೆ ಸೂಚಿಸಿದರು. ನಗರಸಭೆ ವ್ಯಾಪ್ತಿಯಲ್ಲಿ ರಸ್ತೆ ಬದಿ ಸ್ವಚ್ಛತೆಗೆ ಒತ್ತು ನೀಡಬೇಕು. ಸಾರ್ವಜನಿಕರ ಕುಂದುಕೊರತೆ ಆಲಿಸಬೇಕು. ಪ್ಲಾಸ್ಟಿಕ್ ಬಿಸಾಕದಂತೆ ಅರಿವು ಮೂಡಿಸಬೇಕು. ಬೀದಿದೀಪ ಸಮರ್ಪಕ ನಿರ್ವಹಣೆ ಮಾಡಬೇಕು. ರಸ್ತೆ ಗುಂಡಿ ಮುಚ್ಚಬೇಕು. ವಾಹನ ನಿಲುಗಡೆಗೆ ವ್ಯವಸ್ಥೆ ಮಾಡಬೇಕು ಎಂದು ಸೂಚಿಸಿದರು. ಕೃಷಿ, ತೋಟಗಾರಿಕೆ, ಮೀನುಗಾರಿಕೆ, ಪಶುಪಾಲನೆ, ಕಾರ್ಮಿಕ ಇಲಾಖೆ, ಲೋಕೋಪಯೋಗಿ, ಪಂಚಾಯತ್ ರಾಜ್, ಶಾಲಾ ಶಿಕ್ಷಣ ಹೀಗೆ ವಿವಿಧ ಇಲಾಖೆಯ ಕಾರ್ಯಕ್ರಮ ಸಂಬಂಧಿಸಿದಂತೆ ಮಾಹಿತಿ ಪಡೆದರು. ಬುಧವಾರ ನಡೆದ ಲೋಕಾಯುಕ್ತ ದೂರು ಅರ್ಜಿ ಸ್ವೀಕಾರ ಸಂದರ್ಭದಲ್ಲಿ 4 ಅರ್ಜಿಗಳು ಸಲ್ಲಿಕೆಯಾದವು. ಕಂದಾಯ ಕಂದಾಯ ಹಾಗೂ ಸ್ಥಳೀಯ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಹೆಚ್ಚಿನ ಅರ್ಜಿಗಳು ಸಲ್ಲಿಕೆಯಾದವು. ತಹಶೀಲ್ದಾರರಾದ ಪ್ರವೀಣ್ ಕುಮಾರ್ ಅವರು ಕಂದಾಯ ಇಲಾಖೆಗೆ ಸಂಬಂಧಿಸಿದ ಅರ್ಜಿಗಳನ್ನು ಆದಷ್ಟು ಶೀಷ್ಟ್ರ ವಿಲೇವಾರಿ ಮಾಡಲಾಗುವುದು ಎಂದು ತಿಳಿಸಿದರು. ತಾಲ್ಲೂಕು ಮಟ್ಟದ ಅಧಿಕಾರಿಗಳು, ಇತರರು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

ಶಾಸಕರ ಫ್ಲೆಕ್ಸ್ ಗೆ ಹಾನಿ : ನಗರ ಠಾಣೆಗೆ ದೂರು ನೀಡಿದ ಕಾಂಗ್ರೆಸ್

ಅಕ್ಟೋಬರ್ 27, 2026

ಫ್ಲೆಕ್ಸ್ ಹರಿದು ಹಾಕಿದ ಪ್ರಕರಣ : ಆರ್.ಪಿ.ಚಂದ್ರಶೇಖರ್ ಅಸಮಾಧಾನ

ಅಕ್ಟೋಬರ್ 27, 2026

ಶಾಸಕರ ಫ್ಲೆಕ್ಸ್ ಗೆ ಹಾನಿ : ಮನು ಮುದ್ದಪ್ಪ ಖಂಡನೆ

ಅಕ್ಟೋಬರ್ 27, 2026

ಫ್ಲೆಕ್ಸ್ ಹರಿದು ಹಾಕಿದ ಪ್ರಕರಣ : ಆರ್.ಪಿ.ಚಂದ್ರಶೇಖರ್ ಅಸಮಾಧಾನ

ಅಕ್ಟೋಬರ್ 27, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಅ.27 : ಜಿಲ್ಲಾ ಕಾಂಗ್ರೆಸ್ ಕಚೇರಿ ಎದುರು ಅಳವಡಿಸಲಾಗಿದ್ದ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ…

ಶಾಸಕರ ಫ್ಲೆಕ್ಸ್ ಗೆ ಹಾನಿ : ಮನು ಮುದ್ದಪ್ಪ ಖಂಡನೆ

ಅಕ್ಟೋಬರ್ 27, 2026

ನ.2 ರಂದು ಉದ್ಯಮಶೀಲತೆ ಮತ್ತು ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮ

ಅಕ್ಟೋಬರ್ 26, 2026

ಮಹರ್ಷಿ ವಾಲ್ಮೀಕಿ ಅವರು ರಚಿಸಿದ ರಾಮಾಯಣ ಪ್ರೀತಿ ಮತ್ತು ಮಾನವೀಯತೆಯ ಸಂದೇಶ ಸಾರುವ ಮಹಾಕಾವ್ಯ : ಪ್ರೊ.ನಂಜುಂಡಸ್ವಾಮಿ

ಅಕ್ಟೋಬರ್ 26, 2026

ನಾಪೋಕ್ ನಲ್ಲಿ ಸಿಎನ್‌ಸಿ ಮಾನವ ಸರಪಳಿ ಕಾರ್ಯಕ್ರಮ : ಕೊಡವಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆಗಾಗಿ ಹಕ್ಕೊತ್ತಾಯ : ಪಾರಂಪರಿಕ ಮಾತೃಭೂಮಿ ಮತ್ತು ದತ್ತು ಮಾತೃಭೂಮಿ ಸಿದ್ಧಾಂತದ ಕುರಿತು ಎನ್.ಯು.ನಾಚಪ್ಪ ಪ್ರತಿಪಾದನೆ

ಅಕ್ಟೋಬರ್ 26, 2026

ಸೋಮವಾರಪೇಟೆಯಲ್ಲಿ ಆರ್‌ಎಸ್‌ಎಸ್ ವಿಜಯದಶಮಿ ಪಥಸಂಚಲನ

ಅಕ್ಟೋಬರ್ 26, 2026

ದೇವರಾಜ ಅರಸು ನಿಗಮದ ಪಟ್ಟಿಯಿಂದ ತಿಯನ್ ಜಾತಿ ಕೈಬಿಟ್ಟಿರುವುದಕ್ಕೆ ಮಡಿಕೇರಿ ತಾಲ್ಲೂಕು ತಿಯನ್ ಸಂಘ ಆಕ್ಷೇಪ : ಪ್ರತಿಭಟನೆಯ ಎಚ್ಚರಿಕೆ

ಅಕ್ಟೋಬರ್ 26, 2026

ಖರ್ಗೆ ಹೇಳಿಕೆಗೆ ಸೋಮವಾರಪೇಟೆ ಬಿಜೆಪಿ ಮಂಡಲ ಖಂಡನೆ

ಅಕ್ಟೋಬರ್ 26, 2026

ಅ.27ರಂದು 24ನೇ ಕೊಡಗಿನ ಗೌರಮ್ಮ ದತ್ತಿ ಪ್ರಶಸ್ತಿ ಪ್ರದಾನ; ಡಾ. ಲಲಿತ ಕೆ.ಪಿ. ಅವರ ‘ಕೊಡಗಿನ ಜಾನಪದ ಕಥೆಗಳು’ ಕೃತಿಗೆ ಪ್ರಶಸ್ತಿ

ಅಕ್ಟೋಬರ್ 25, 2026

ವಿರಾಜಪೇಟೆಯಲ್ಲಿ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ; ಸ್ವಾವಲಂಬಿ ಬದುಕಿಗೆ ಶಿಕ್ಷಣ ಮತ್ತು ಆರ್ಥಿಕ ಸ್ವಾತಂತ್ರ್ಯ ಮುಖ್ಯ: ಆನಂದ ಸುವರ್ಣ

ಅಕ್ಟೋಬರ್ 25, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.