ಮಡಿಕೇರಿ ಜ.9 NEWS DESK : ಲೋಕೋಪಯೋಗಿ ಸಚಿವರಾದ ಸತೀಶ ಜಾರಕಿಹೊಳಿ ಅವರು ಜ.10 ಮತ್ತು 11 ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಸಚಿವರು ಜ.10 ರಂದು ಮಧ್ಯಾಹ್ನ 3 ಗಂಟೆಗೆ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಲೋಕೋಪಯೋಗಿ ಇಲಾಖೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ನಂತರ ಸಂಜೆ 4.30 ಗಂಟೆಗೆ ವಿರಾಜಪೇಟೆ ಲೋಕೋಪಯೋಗಿ ಪ್ರವಾಸಿ ಮಂದಿರದಲ್ಲಿ ಕೊಡಗು ಜಿಲ್ಲಾ ವ್ಯಾಪ್ತಿಯ ಲೋಕೋಪಯೋಗಿ ಇಲಾಖೆಗೆ ಸಂಬಂಧಿಸಿದಂತೆ ಇಲಾಖಾ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ. ಜ.11 ರಂದು ಬೆಳಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿ ಕಚೇರಿ ಬಳಿ ನಿರ್ಮಿಸಲಾಗಿರುವ ತಡೆಗೋಡೆಯ ಪರಿವೀಕ್ಷಣೆ ನಡೆಸಲಿದ್ದಾರೆ. ಬಳಿಕ ಮಧ್ಯಾಹ್ನ 12 ಗಂಟೆಗೆ ಸೋಮವಾರಪೇಟೆ ತಾಲ್ಲೂಕು ವ್ಯಾಪ್ತಿಯ ಐಗೂರು ಸೇತುವೆ ನಿರ್ಮಾಣ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ನಂತರ ಮಧ್ಯಾಹ್ನ 1.30 ಗಂಟೆಗೆ ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆ ವತಿಯಿಂದ ನಿರ್ಮಾಣವಾಗುತ್ತಿರುವ ಸೋಮವಾರಪೇಟೆ ತಾಲ್ಲೂಕಿನ ತೋಳೂರು ಶೆಟ್ಟಿಹಳ್ಳಿ ರಸ್ತೆ ಕಾಮಗಾರಿ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಬಳಿಕ ಮಧ್ಯಾಹ್ನ 3 ಗಂಟೆಗೆ ಸೋಮವಾರಪೇಟೆ ತಾಲ್ಲೂಕಿನ ಶನಿವಾರಸಂತೆಯಲ್ಲಿ ಸಿಐಆರ್‍ಎಫ್ ನಿಧಿಯಿಂದ ನಿರ್ಮಾಣವಾಗುತ್ತಿರುವ ರಸ್ತೆ ಕಾಮಗಾರಿ ಪರಿವೀಕ್ಷಣೆ ಮಾಡಲಿದ್ದಾರೆ ಎಂದು ಲೋಕೋಪಯೋಗಿ ಸಚಿವರ ಆಪ್ತ ಕಾರ್ಯದರ್ಶಿ ಎನ್.ರಾಜಪ್ಪ ಅವರು ತಿಳಿಸಿದ್ದಾರೆ.