ಮಡಿಕೇರಿ ಜ.9 NEWS DESK : ಕೊಡಗು ಜಿಲ್ಲಾ ಸರ್ವೋದಯ ಸಮಿತಿ ವತಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಲಾಯಿತು. ಶಾಸಕ ಡಾ.ಮಂತರ್ ಗೌಡ ನೇತೃತ್ವದಲ್ಲಿ ಬೆಂಗಳೂರಿನ ಮುಖ್ಯಮಂತ್ರಿಗಳ ನಿವಾಸ ಕಾವೇರಿಯಲ್ಲಿ ಭೇಟಿ ಮಾಡಿದ ಸಮಿತಿಯ ಪ್ರಮುಖರು ಮಡಿಕೇರಿಯ ಗಾಂಧಿ ಸ್ಮಾರಕದ ಮುಂದುವರಿದ ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನ ಒದಗಿಸಿ ಸಹಕಾರ ನೀಡುವಂತೆ ಮನವಿ ಸಲ್ಲಿಸಿದರು. ಈ ಸಂದರ್ಭ ಸಮಿತಿ ಅಧ್ಯಕ್ಷ ಅಂಬೇಕಲ್ ಕುಶಾಲಪ್ಪ, ಪ್ರಮುಖರಾದ ಮುನೀರ್ ಅಹ್ಮದ್, ನವೀನ್ ಅಂಬೇಕಲ್, ಕೆ.ಟಿ. ಬೇಬಿ ಮ್ಯಾಥ್ಯೂ ಸೇರಿದಂತೆ ಪದಾಧಿಕಾರಿಗಳು ಮನವಿ ಸಲ್ಲಿಕೆ ಸಂದರ್ಭ ಹಾಜರಿದ್ದರು.