ಮಡಿಕೇರಿ ಜ.9 NEWS DESK : ವಿರಾಜಪೇಟೆ ಕಾವೇರಿ ಪದವಿ ಪೂರ್ವ ಕಾಲೇಜಿನಲ್ಲಿ ಪೋಷಕ- ಅಧ್ಯಪಕರ ಸಭೆ ನಡೆಯಿತು. ಕಾಲೇಜಿನ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಎನ್.ಎಂ.ನಾಣಯ್ಯ, ವಿದ್ಯಾರ್ಥಿಗಳ ಶೈಕ್ಷಣಿಕ ವಿಕಸನದಲ್ಲಿ ಪೋಷಕರ ಪಾತ್ರ ಮಹತ್ತರವಾದದ್ದು. ವಿದ್ಯಾರ್ಥಿಗಳಿಗೆ ಪರೀಕ್ಷಾ ಸಮಯದಲ್ಲಿ ಹೆಚ್ಚಿನ ಸಮಯವನ್ನು ಓದಿಗೆ ಮೀಸಲಿಡಬೇಕು, ಮೊಬೈಲ್ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಬೇಕೆಂದರು. ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಸಂಘದ ಸಂಚಾಲಕಿ ಎಂ.ಪಿ.ದಮಯಂತಿ ಮಾತನಾಡಿ, ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಬೇಕು, ಪರೀಕ್ಷೆ , ಆಂತರಿಕ ಮೌಲ್ಯಮಾಪನ ಬಗ್ಗೆ ಪೋಷಕರಿಗೆ ತಿಳಿಸಿದರು. ನಂತರ 2025-2026 ನೇ ಸಾಲಿನ ಶೈಕ್ಷಣಿಕ ವರ್ಷದ ಪೋಷಕ ಮತ್ತು ಅಧ್ಯಾಪಕ ಸಭೆಯ ನೂತನ ಉಪಾಧ್ಯಕ್ಷರಾಗಿ ಕೃಪಾ ಚಂಗಪ್ಪ ಹಾಗೂ ಸದಸ್ಯರುಗಳಾಗಿ ಹೆಚ್ ಎನ್. ಶೋಭಾ ಮತ್ತು ಪ್ರವೀಣ್ ಅವರನ್ನು ಆಯ್ಕೆ ಮಾಡಲಾಯಿತು. ಸಭೆಯಲ್ಲಿ ಉಪನ್ಯಾಸಕರು, ವಿದ್ಯಾರ್ಥಿಗಳು ಮತ್ತು ಪೋಷಕರು ಹಾಜರಿದ್ದರು. ಸಭೆಯ ಆರಂಭದಲ್ಲಿ ಹರ್ಷ ಮತ್ತು ತಂಡದವರು ಪ್ರಾರ್ಥಿಸಿದರು. ಉಪನ್ಯಾಸಕಿ ಗಾಯತ್ರಿ ನಿರೂಪಿಸಿದರು. ಶಿಕ್ಷಕ ಮತ್ತು ಪೋಷಕ ಸಂಘದ ಸಂಚಾಲಕರಾದ ಎಂ.ಬಿ.ದೇಚಮ್ಮ ಸ್ವಾಗತಿಸಿದರು. ಉಪನ್ಯಾಸಕಿ ಅನುಪಮ ತಿಮ್ಮಯ್ಯ ವಂದಿಸಿದರು.