ವಿರಾಜಪೇಟೆ NEWS DESK ಜ.10 : ಕರ್ನಾಟಕ ರಾಜ್ಯ ಡಾ.ಗಂಗೂಬಾಯಿ ಹಾನಗಲ್ ವಿಶ್ವವಿದ್ಯಾಲಯದ ವತಿಯಿಂದ ನಡೆದ ಕರ್ನಾಟಕ ಶಾಸ್ತ್ರೀಯ ಸಂಗೀತದ ಜೂನಿಯರ್ ವಿಭಾಗದ ಪರೀಕ್ಷೆಯಲ್ಲಿ ಸಮೃದ್ಧಿ ಎ.ವಿ ಶೇ.86 ಅಂಕಗಳನ್ನು ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣಳಾಗಿ ಕೊಡಗು ಜಿಲ್ಲೆಗೆ ದ್ವಿತೀಯ ಸ್ಥಾನ ಪಡೆದಿದ್ದಾರೆ. ಸಿದ್ದಾಪುರದ ಪತ್ರಕರ್ತ ಎ.ಎನ್.ವಾಸು ಆಚಾರ್ಯ ಹಾಗೂ ವಿಶಾಲಾಕ್ಷಿ ದಂಪತಿ ಪುತ್ರಿಯಾಗಿರುವ ಇವರು ವಿರಾಜಪೇಟೆಯ ಸ್ವರಾರ್ಣವ ಸಂಗೀತ ಶಾಲೆಯ ಸಂಸ್ಥಾಪಕ ಗುರು ದಿಲಿಕುಮಾರ್ ಅವರಲ್ಲಿ ಸಂಗೀತ ಅಭ್ಯಾಸ ಮಾಡುತ್ತಿದ್ದಾರೆ. ಸಿದ್ದಾಪುರದ ಶ್ರೀ ಕೃಷ್ಣ ವಿದ್ಯಾ ಮಂದಿರ ಶಾಲೆಯಲ್ಲಿ 10ನೇ ತರಗತಿಯಲ್ಲಿ ಓದುತ್ತಿದ್ದಾರೆ.