ಮಡಿಕೇರಿ ಜ.10 NEWS DESK : ಕಾರ್ಮಿಕ ಇಲಾಖೆ, ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ಕಟ್ಟಡ ಕಾರ್ಮಿಕರಿಗೆ ಕಾರ್ಮಿಕ ಕಿಟ್ ವಿತರಿಸಲಾಯಿತು. ಕೂಡಿಗೆ ರಾಮೇಶ್ವರ ಕೂಡುಮಂಗಳೂರು ಕೃಷಿ ಪತ್ತಿನ ಸಹಕಾರ ಸಂಘದ ಸಭಾಂಗಣದಲ್ಲಿ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂಥರ್ ಗೌಡ ಮಂತರ್ ಗೌಡ ಕಿಟ್ ವಿತರಿಸಿ ಮಾತನಾಡಿ, ರಾಜ್ಯ ಸರ್ಕಾರವು ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ವಿವಿಧ ಯೋಜನೆಗಳನ್ನು ಜಾರಿಗೆ ತಂದಿದೆ. ಅಲ್ಲದೇ ಇಲಾಖೆಯ ಮುಖೇನ ವಿವಿಧ ಹಂತಗಳಲ್ಲಿ ಕಾರ್ಮಿಕರ ಉಚಿತ ಪರಿಕರಗಳ ಸೌಲಭ್ಯ ಸೇರಿದಂತೆ ಅನೇಕ ಯೋಜನೆಗಳನ್ನು ಜಾರಿಗೆ ತರಲಾಗಿದೆ ಕಾರ್ಮಿಕರು ಅದರ ಸದುಪಯೋಗವನ್ನು ಮಾಡಿಕೊಳ್ಳುವಂತೆ ಸಲಹೆ ನೀಡಿದರು. ಈ ಸಂದರ್ಭ ಸೋಮವಾರಪೇಟೆ ತಾಲ್ಲೂಕು ಕಾರ್ಯನಿರ್ವಾಹಣಾಧಿಕಾರಿ ಪರಮೇಶ್, ಕುಶಾಲನಗರ ಕುಡ ಅಧ್ಯಕ್ಷ ಪ್ರಮೋದ್ ಮುತ್ತಪ್ಪ, ರಾಜ್ಯ ಕಾಂಗ್ರೆಸ್ ಸಮಿತಿ ಸದಸ್ಯ ಮಂಜುನಾಥ ಗುಂಡೂರಾವ್, ಜಿಲ್ಲಾ ಕಾರ್ಮಿಕ ಅಧಿಕಾರಿ ಟಿ.ಕಾವೇರಿ, ಮಡಿಕೇರಿ ಹಿರಿಯ ಕಾರ್ಮಿಕ ನಿರೀಕ್ಷಕ ಎಂ.ಎಂ.ಯತ್ನಟ್ಟಿ, ಸೋಮವಾರಪೇಟೆ ಹಿರಿಯ ಕಾರ್ಮಿಕ ನಿರೀಕ್ಷಕ ಶಶಿಧರ್, ವಿರಾಜಪೇಟೆ ವೃತ ನಿರೀಕ್ಷಕ ನಿಖಿಲ್ ಚಂದ್ರ, ಎಕ್ಸಿಕ್ಯುಟಿವ್ ಕೆ.ಎಸ್. ಪ್ರಸನ್ನ ಸೇರಿದಂತೆ ಇಲಾಖೆಯ ಸಿಬ್ಬಂದಿ ವರ್ಗದವರು, ಕಟ್ಟಡ ಕಾರ್ಮಿಕರು ಹಾಜರಿದ್ದರು.