ನಾಪೋಕ್ಲು ಜ.10 NEWS DESK : ನಾಪೋಕ್ಲು ಶೌರ್ಯ ವಿಪತ್ತು ನಿರ್ವಹಣಾ ಘಟಕ ವತಿಯಿಂದ ಅಂಗನವಾಡಿ ಕೇಂದ್ರದಲ್ಲಿ ಸ್ವಚ್ಛತಾ ಶ್ರಮದಾನ ಮಾಡಲಾಯಿತು. ಭಗವತಿ ದೇವಸ್ಥಾನ ಬಳಿ ಇರುವ ಅಂಗನವಾಡಿ ಕೇಂದ್ರದ ಆವರಣದಲ್ಲಿ ಮಕ್ಕಳಿಗೆ ಆಟವಾಡಲು ಅಡಚಣೆ ಆಗುತ್ತಿರುವ ಮಣ್ಣಿನ ದಿನ್ನೆಯನ್ನು ಶ್ರಮದಾನದ ಮೂಲಕ ತೆಗೆದು ಸಮತಟ್ಟು ಮಾಡಿ ಆವರಣವನ್ನು ಸ್ವಚ್ಛಗೊಳಿಸಿದರು. ಈ ಸಂದರ್ಭ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಶೌರ್ಯ ಸಂಯೋಜಕಿ ದಿವ್ಯ ಮಂದಪ್ಪ ಹಾಗೂ ಸದಸ್ಯರು, ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಹಾಜರಿದ್ದರು.
ವರದಿ : ದುಗ್ಗಳ ಸದಾನಂದ.