ಮಡಿಕೇರಿ ಜ.10 NEWS DESK : ಕೊಡಗು ಜಿಲ್ಲೆಗೆ ಆಗಮಿಸುತ್ತಿರುವ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಅವರನ್ನು ಆನೆ ಚೌಕೂರ್ ಗೇಟ್ ಬಳಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ ನೇತೃತ್ವದಲ್ಲಿ ಕಾಂಗ್ರೆಸ್ ಪ್ರಮುಖರು ಹಾಗೂ ಕಾರ್ಯಕರ್ತರು ಸ್ವಾಗತಿಸಿದರು. ಸಚಿವರೊಂದಿಗೆ ಮುಖ್ಯಮಂತ್ರಿಗಳ ಕಾನೂನು ಸಲಹಾಗಾರ ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಹಾಗೂ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ರಾಜ್ಯ ಉಪಾಧ್ಯಕ್ಷರಾದ ಎಸ್.ಆರ್. ಮೆಹರೋಜ್ ಖಾನ್ ಮತ್ತಿತರ ಪ್ರಮುಖರು ಆಗಮಿಸಿದರು. ಈ ಸಂದರ್ಭ ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೀದೇರಿರ ನವೀನ್, ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಟ್ಟಡ ರಂಜಿ ಪೂಣಚ್ಚ, ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಇಸ್ಮಾಯಿಲ್, ಹಿರಿಯ-ಕಿರಿಯ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಹಾಜರಿದ್ದರು.