ಮಡಿಕೇರಿ ಜ.11 NEWS DESK : 2025-26ನೇ ಸಾಲಿಗೆ ಏಕಲವ್ಯ ಮಾದರಿ ವಸತಿ ಶಾಲೆ, ಬಾಳುಗೋಡು, ವಿರಾಜಪೇಟೆ ತಾಲ್ಲೂಕು ಇಲ್ಲಿ 6ನೇ ತರಗತಿಗೆ ಪ್ರವೇಶಾತಿ ಪ್ರಾರಂಭವಾಗಿದ್ದು, ಈ ಸಂಬಂಧ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ವಿವಿಧ ವರ್ಗಗಳ 5ನೇ ತರಗತಿಯಲ್ಲಿ ಪ್ರಸ್ತುತ ವ್ಯಾಸಂಗ ಮಾಡುತ್ತಿರುವ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು, ಪ್ರವೇಶಾತಿಯು ರಾಷ್ಟ್ರೀಯ ಬುಡಕಟ್ಟು ವಿದ್ಯಾರ್ಥಿಗಳ ಶೈಕ್ಷಣಿಕ ಸಂಘ, ನವದೆಹಲಿ ಅವರು ರೂಪಿಸಿರುವ ನಿಯಮಗಳಿಗೆ ಬದ್ಧವಾಗಿದ್ದು, ಪ್ರವೇಶಾತಿ ಪರೀಕ್ಷೆಯ ಮೂಲಕ ಸಂಪೂರ್ಣ ಪಾರದರ್ಶಕವಾಗಿ ಪ್ರವೇಶಾತಿಯನ್ನು ಕಲ್ಪಿಸಲಾಗಿದ್ದು, ಅರ್ಜಿಯನ್ನು ಜನವರಿ, 31 ರೊಳಗೆ ಸಲ್ಲಿಸಬಹುದು. ಅರ್ಜಿಯನ್ನು ಪಡೆಯಲು ಮೇವಾ ಲಾಲ್ ಖಟಿಕ್, ಪ್ರಾಂಶುಪಾಲರು, ಏಕಲವ್ಯ ಮಾದರಿ ವಸತಿ ಶಾಲೆ, ಬಾಳುಗೋಡು, ವಿರಾಜಪೇಟೆ ತಾಲ್ಲೂಕು, ಕೊಡಗು ಜಿಲ್ಲೆ. ಮೊಬೈಲ್ ಸಂಖ್ಯೆ: 9828472732. ಸುಭಾಷ್ ಎಂ, ಕನ್ನಡ ಶಿಕ್ಷಕರು, ಏಕಲವ್ಯ ಮಾದರಿ ವಸತಿ ಶಾಲೆ, ಬಾಳುಗೋಡು, ವಿರಾಜಪೇಟೆ ತಾಲ್ಲೂಕು, ಕೊಡಗು ಜಿಲ್ಲೆ. ಮೊಬೈಲ್ ಸಂಖ್ಯೆ: 9164709751 ಹಾಗೂ ಮನೋಜ್ ಕುಮಾರ್ ಸಿ.ಎಂ, ಜೀವಶಾಸ್ತ್ರ ಉಪನ್ಯಾಸಕರು, ಏಕಲವ್ಯ ಮಾದರಿ ವಸತಿ ಶಾಲೆ, ಬಾಳುಗೋಡು, ವಿರಾಜಪೇಟೆ ತಾಲ್ಲೂಕು, ಕೊಡಗು ಜಿಲ್ಲೆ. ಮೊಬೈಲ್ ಸಂಖ್ಯೆ: 7338242252 ನ್ನು ಸಂಪರ್ಕಿಸಬಹುದು ಎಂದು ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ ಇಲಾಖೆಯ ಯೋಜನಾ ಸಮನ್ವಯಾಧಿಕಾರಿ ಅವರು ತಿಳಿಸಿದ್ದಾರೆ.