ಮಡಿಕೇರಿ ಜ.11 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದೊಂದಿಗೆ ಶಿವಯೋಗಿ ಸಿದ್ದರಾಮೇಶ್ವರ ಜಯಂತಿ ಕಾರ್ಯಕ್ರಮವು ಜನವರಿ, 14 ರಂದು ಬೆಳಗ್ಗೆ 11 ಗಂಟೆಗೆ ನಗರದ ಗಾಂಧಿ ಭವನದಲ್ಲಿ ನಡೆಯಲಿದೆ. ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ಶಾಸಕರಾದ ಡಾ.ಮಂತರ್‍ಗೌಡ, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ, ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಶಾಸಕರಾದ ಎಂ.ಪಿ.ಸುಜಾ ಕುಶಾಲಪ್ಪ, ಡಾ.ಧನಂಜಯ ಸರ್ಜಿ, ಎಸ್.ಎಲ್.ಭೋಜೇಗೌಡ, ಜಿಲ್ಲಾ ಬೋವಿ ಸಮಾಜದ ಅಧ್ಯಕ್ಷರಾದ ಡಿ.ಸುಜಿತ್, ಸರಸ್ವತಿ ಡಿಎಡ್ ಕಾಲೇಜಿನ ಪ್ರಾಂಶುಪಾಲರಾದ ಕುಮಾರ್, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ ಇತರರು ಪಾಲ್ಗೊಳ್ಳಲಿದ್ದಾರೆ.