ನಾಪೋಕ್ಲು ಜ.11 : ಕಕ್ಕುಂದಕಾಡು ಶ್ರೀ ವೆಂಕಟೇಶ್ವರ ದೇವಾಲಯದಲ್ಲಿ ವೈಕುಂಠ ಏಕಾದಶಿ ವಿಶೇಷ ಪೂಜೆಯೂ ಶ್ರದ್ಧಾಭಕ್ತಿಯಿಂದ ಜರುಗಿತು.
ವೈಕುಂಠ ಏಕಾದಶಿ ಅಂಗವಾಗಿ ಮುಂಜಾನೆಯಿಂದಲೇ ಶ್ರೀ ವೆಂಕಟೇಶ್ವರ ದೇವರಿಗೆ ಪಂಚಾಮೃತ ಅಭಿಷೇಕ, ಹೂವಿನ ಅಲಂಕಾರ ಸೇರಿದಂತೆ ವಿವಿಧ ಪೂಜಾ ಕೈಂಕರ್ಯಗಳು ನೆರವೇರಿತು. ಮಧ್ಯಾಹ್ನ ಶ್ರೀ ವೆಂಕಟೇಶ್ವರನಿಗೆ ವಿಶೇಷ ಮಹಾ ಪೂಜೆ ಹಾಗೂ ಮಹಾ ಮಂಗಳಾರತಿ ನಡೆಯಿತು. ಬಳಿಕ ನೆರೆದಿದ್ದ ಭಕ್ತಾಧಿಗಳಿಗೆ ಪ್ರಸಾದ ವಿತರಣೆ ಹಾಗೂ ಅನ್ನದಾನ ನೆರವೇರಿತು. ಈ ಸಂದರ್ಭ ದೇವಾಲಯ ಆಡಳಿತ ಮಂಡಳಿ ಸೇರಿದಂತೆ ಭಕ್ತಾದಿಗಳು ಹಾಜರಿದ್ದರು. ದೇವಾಲಯದ ಮುಖ್ಯ ಆರ್ಚಕ ಸುದೀರ ಅವರು ಪೂಜಾ ಕೈಂಕರ್ಯಗಳು ನೆರವೇರಿದರು.
ವರದಿ : ದುಗ್ಗಳ ಸದಾನಂದ.