
ಮಡಿಕೇರಿ NEWS DESK ಜ.11 : ಬೆಳ್ಳಿ ಹಬ್ಬದ ಸಂಭ್ರಮದಲ್ಲಿರುವ ಕೊಡವ ಕುಟುಂಬಗಳ ನಡುವಿನ ಹಾಕಿ ಪಂದ್ಯಾವಳಿಯ “ಮುದ್ದಂಡ ಕಪ್ ಹಾಕಿ ಉತ್ಸವ”ದ ಲೋಗೋವನ್ನು ಇಂದು ಮಡಿಕೇರಿಯ ಕಾವೇರಿ ಹಾಲ್‌ನಲ್ಲಿ ಬಿಡುಗಡೆ ಮಾಡಲಾಯಿತು. ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಅಜ್ಜಿಕುಟ್ಟೀರ ಎಸ್.ಪೊನ್ನಣ್ಣ, ಮೈಸೂರು-ಕೊಡಗು ಸಂಸದ ಯದುವೀರ್ ಒಡೆಯರ್, ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ, ಮಾಜಿ ವಿಧಾನಸಭಾ ಅಧ್ಯಕ್ಷ ಕೆ.ಜಿ.ಬೋಪಯ್ಯ, ವಿಧಾನ ಪರಿಷತ್ ಮಾಜಿ ಸದಸ್ಯರಾದ ಶಾಂತೆಯAಡ ವೀಣಾ ಅಚ್ಚಯ್ಯ, ಕೊಡವ ಹಾಕಿ ಅಕಾಡೆಮಿಯ ಅಧ್ಯಕ್ಷ ಪಾಂಡಂಡ ಬೋಪಣ್ಣ ಮತ್ತಿತರರು ಲೋಗೋವನ್ನು ಬಿಡುಗಡೆ ಮಾಡಿದರು. ಮುದ್ದಂಡ ಕಪ್ ಹಾಕಿ ಹಬ್ಬದ ಅಧ್ಯಕ್ಷ ರಶಿನ್ ಸುಬ್ಬಯ್ಯ, ಉಪಾಧ್ಯಕ್ಷ ಮುದ್ದಂಡ ಡೀನ್ ಬೋಪಣ್ಣ, ಕಾರ್ಯದರ್ಶಿ ಮುದ್ದಂಡ ರಂಜಿತ್ ಪೊನ್ನಪ್ಪ, ಗೌರವಾಧ್ಯಕ್ಷ ಮುದ್ದಂಡ ಬಿ.ದೇವಯ್ಯ, ಮುದ್ದಂಡ ಒಕ್ಕದ ಪಟ್ಟೆದಾರ ಮುದ್ದಂಡ ಡಾಲಿ ತಿಮ್ಮಯ್ಯ ಉಪಸ್ಥಿತರಿದ್ದರು.










