ಮಡಿಕೇರಿ ಜ.11 NEWS DESK : ತಾಳತ್ತಮನೆ ನೇತಾಜಿ ಯುವಕ ಹಾಗೂ ಯುವತಿ ಮಂಡಲದ 33ನೇ ವಾರ್ಷಿಕೋತ್ಸವ ಹಾಗೂ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 128ನೇ ಜನ್ಮದಿನಾಚರಣೆಯ ಅಂಗವಾಗಿ ಜ.22 ಮತ್ತು 23 ರಂದು ಅಂತರರಾಜ್ಯ ಮಟ್ಟದ ಮುಕ್ತ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿ, ಜಿಲ್ಲಾ ಮಟ್ಟದ ಪುರುಷರ ಮತ್ತು ಮಹಿಳೆಯರ ಹಗ್ಗಜಗ್ಗಾಟ ಹಾಗೂ ಜಿಲ್ಲಾಮಟ್ಟದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ತಾಳತ್ತಮನೆ ನೇತಾಜಿ ಯುವಕ ಮಂಡಲದ ಅಧ್ಯಕ್ಷ ಕೊಂಡಿರ ಪಿ.ಕಾರ್ಯಪ್ಪ, ನೆಹರು ಯುವ ಕೇಂದ್ರ ಮಡಿಕೇರಿ, ಯುವ ಸಮಬಲೀರಣ ಮತ್ತು ಕ್ರೀಡಾ ಇಲಾಖೆ ಕೊಡಗು, ತಾಲ್ಲೂಕು ಯುವ ಒಕ್ಕೂಟ ಮಡಿಕೇರಿಯ ಸಂಯುಕ್ತಾಶ್ರಯದಲ್ಲಿ ತಾಳತ್ತಮನೆ ಆಟದ ಮೈದಾನದಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು. ಜ.22 ರಂದು ಅಪರಾಹ್ನ 3.30 ಗಂಟೆಗೆ ತನ್ನ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ತಾಳತ್ತಮನೆ ಹೋಟೆಲ್ ಆಕ್ಸಿರಿಚ್ ಮಾಲೀಕ ಪಿ.ಟಿ.ಉಣ್ಣಿಕೃಷ್ಣ ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ಮಡಿಕೇರಿ ತಾಲ್ಲೂಕು ಗುತ್ತಿಗೆದಾರರ ಸಂಘದ ಅಧ್ಯಕ್ಷ ರಾಜೀವ್ ಲೋಚನ, ಮದೆ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಹೆಚ್.ಜೆ.ಯಾದವ್, ಮದೆನಾಡು ವಿದ್ಯಾ ಸಂಸ್ಥೆಯ ಬಿ.ಜಿ.ಎಸ್ ಅಧ್ಯಕ್ಷ ಮುದ್ಯನ ಕಿಶನ್ ಪಾಲ್ಗೊಳ್ಳಲಿದ್ದಾರೆ ಎಂದರು. ಸಂಜೆ 4.30 ಗಂಟೆಯಿಂದ ಅಂತರ ರಾಜ್ಯ ಮಟ್ಟದ ಮುಕ್ತ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿ ನಡೆಯಲಿದೆ ಎಂದು ತಿಳಿಸಿದರು. ಜ.23 ರಂದು ಮಧ್ಯಾಹ್ನ 12.30 ಗಂಟೆಯಿಂದ ಜಿಲ್ಲಾ ಮಟ್ಟದ ಪುರುಷರ ಮತ್ತು ಮಹಿಳೆಯರ ಹಗ್ಗಜಗ್ಗಾಟ ಪಂದ್ಯಾವಳಿ ನಡೆಯಲಿದ್ದು, ಕಾರ್ಯಕ್ರಮವನ್ನು ಮದೆ ಗ್ರಾ.ಪಂ ಅಧ್ಯಕ್ಷರಾದ ಬಿ.ಎಸ್.ವಿಮಲಾಕ್ಷಿ ಉದ್ಘಾಟಿಸಲಿದ್ದಾರೆ. ತಾಳತ್ತಮನೆ ನೇತಾಜಿ ಯುವತಿ ಮಂಡಳಿ ಅಧ್ಯಕ್ಷ ಟಿ.ಎಸ್.ಸಿಂಧು ಸುದೇವ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮಡಿಕೇರಿಯ ಎಂ.ಎಸ್.ಪೈ ಪೆಟ್ರೋಲ್ ಬಂಕ್ ಮಾಲೀಕ ಬಿ.ಕೆ.ಸೀತಾರಾಮ ರೈ (ಮಣಿ), ಮಡಿಕೇರಿ ಹೊಟೇಲ್ ಸಮುದ್ರ ಮಾಲೀಕ ಶರತ್ ಶೆಟ್ಟಿ, ಉದ್ಯಮಿ ಪ್ರಿಯಾ ದಿನೇಶ್ ಪಾಲ್ಗೊಳ್ಳಲಿದ್ದಾರೆ ಎಂದರು.
ಸಂಜೆ 5.30 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದ್ದು, ಅಧ್ಯಕ್ಷತೆಯನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕೊಡಗು ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆನಂದ್ ಪ್ರಕಾಶ್ ಮೀನಾ, ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಾಜೇಶ್ ಯಲ್ಲಪ್ಪ ಸೇರಿದಂತೆ ಮತ್ತಿತರ ಗಣ್ಯರು ಪಾಲ್ಗೊಳ್ಳಲಿದ್ದಾರೆ. ಮಡಿಕೇರಿ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಡಾ.ಬಿ.ಸಿ.ದೊಡ್ಡೆಗೌಡ ಸಮಾರೋಪ ಭಾಷಣ ಮಾಡಲಿದ್ದಾರೆ. ನಂತರ ಜಿಲ್ಲಾ ಮಟ್ಟದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ ಎಂದು ಮಾಹಿತಿ ನೀಡಿದರು.
ಸನ್ಮಾನ :: ಯೋಗ ಕ್ಷೇತ್ರದಲ್ಲಿ ಗೋಲ್ಡನ್ ಬುಕ್ ಆಫ್ ವಲ್ಡ್ ರೆಕಾರ್ಡ್ಸ್ ಪ್ರಶಸ್ತಿ ವಿಜೇತೆ ಬಿ.ಕೆ.ಸಿಂಚನ ಹಾಗೂ ನೇತಾಜಿ ಯುವ ಮಂಡಲದ ಮಾಜಿ ಅಧ್ಯಕ್ಷ ಕೆ.ಆರ್.ಕುಶಾಲಪ್ಪ, ಯುವತಿ ಮಂಡಳಿಯ ಮಾಜಿ ಅಧ್ಯಕ್ಷೆ ಎ.ಆರ್.ನೇತ್ರಾವತಿ ಅವರನ್ನು ಸನ್ಮಾನಿಸಿ, ಗೌರವಿಸಲಾಗುವುದೆಂದರು.
ಸುದ್ದಿಗೋಷ್ಠಿಯಲ್ಲಿ ಪ್ರಧಾನ ಕಾರ್ಯದರ್ಶಿ ದಿವೇಶ್, ಖಜಾಂಚಿ ಡಿ.ಪಿ.ಮಿಲನ್, ಕ್ರೀಡಾಕೂಟದ ಕಾರ್ಯದರ್ಶಿ ನಯನ್ ರೈ, ಕ್ರೀಡಾ ಸಂಚಾಲಕ ಸಿ.ಸುರೇಶ್, ಸದಸ್ಯ ಬಿ.ಆರ್.ಸದಾಶಿವ ರೈ ಉಪಸ್ಥಿತರಿದ್ದರು.