Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?
  • *ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*
  • ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!
  • *ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*
  • *ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*
  • *ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*
  • *ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*
  • *ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*
  • *ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*
  • *ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಕೊಡವ ಮಕ್ಕಡ ಕೂಟದ 108ನೇ ಪುಸ್ತಕ ಫ್ಯಾನ್ಸಿ ಮುತ್ತಣ್ಣ ರಚಿತ “ಜೇನು ಗೂಡು” ಬಿಡುಗಡೆ : ಬರವಣಿಗೆಗೆ ಮನುಷ್ಯನನ್ನು ಬದಲಾಯಿಸುವ ಶಕ್ತಿ ಇದೆ : ಬಾಳೆಯಡ ಕಾಳಪ್ಪ*
ಇತ್ತೀಚಿನ ಸುದ್ದಿಗಳು

*ಕೊಡವ ಮಕ್ಕಡ ಕೂಟದ 108ನೇ ಪುಸ್ತಕ ಫ್ಯಾನ್ಸಿ ಮುತ್ತಣ್ಣ ರಚಿತ “ಜೇನು ಗೂಡು” ಬಿಡುಗಡೆ : ಬರವಣಿಗೆಗೆ ಮನುಷ್ಯನನ್ನು ಬದಲಾಯಿಸುವ ಶಕ್ತಿ ಇದೆ : ಬಾಳೆಯಡ ಕಾಳಪ್ಪ*

January 12, 20253 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ NEWS DESK ಜ.12 : ಬರವಣಿಗೆಗೆ ಮನುಷ್ಯನ ಜೀವನವನ್ನು ಬದಲಾಯಿಸುವ ಅದ್ಭುತವಾದ ಶಕ್ತಿ ಇದೆ ಎಂದು ಬ್ಲೂ ಡಾರ್ಟ್ ಸಲಹೆಗಾರ ಹಾಗೂ ಹಿರಿಯ ಕ್ರೀಡಾಪಟು ಬಾಳೆಯಡ ಕಾಳಪ್ಪ ಅಭಿಪ್ರಾಯಪಟ್ಟಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಕೊಡವ ಮಕ್ಕಡ ಕೂಟದ 108ನೇ ಮತ್ತು ಲೇಖಕಿ ಹಂಚೆಟ್ಟಿರ ಫ್ಯಾನ್ಸಿ ಮುತ್ತಣ್ಣ ರಚಿತ 10ನೇ ಪುಸ್ತಕ “ಜೇನು ಗೂಡು” ಬಿಡುಗಡೆಗೊಳಿಸಿ ಅವರು ಮಾತನಾಡಿದರು. ಪುಸ್ತಕಗಳು ಮನುಷ್ಯನ ಜೀವನದಲ್ಲಿ ಬದಲಾವಣೆಯನ್ನು ತರಲು ಶಕ್ತವಾಗಿವೆ, ಬರಹಗಾರರು ತಮಗಾಗಿ ಅಥವಾ ಸಮಾಜದ ಕಲ್ಯಾಣಕ್ಕಾಗಿ ಪುಸ್ತಕಗಳನ್ನು ಬರೆಯಬಹುದು. ಆದರೆ ಬರವಣಿಗೆಯಲ್ಲಿರುವ ಶಕ್ತಿ ಸಾಮಾಜಿಕ ಪರಿವರ್ತನೆಗೆ ಸಹಕಾರಿಯಾಗಿದೆ ಎಂದರು. ಪುಸ್ತಕಗಳನ್ನು ಹೆಚ್ಚು ಓದುವ ಮೂಲಕ ಉತ್ತಮ ಸಂದೇಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಬರೆಯುವುದರಿಂದ ಅಥವಾ ಓದುವ ಹವ್ಯಾಸದಿಂದ ಜೀವನದ ಕುಂದು ಕೊರತೆ ಮತ್ತು ವ್ಯತ್ಯಾಸಗಳು ದೂರವಾಗುತ್ತವೆ. ಮಕ್ಕಳ ಜೀವನದಲ್ಲಿ ತಂದೆ ತಾಯಿಗಳ ಪಾತ್ರ ದೊಡ್ಡದಾಗಿರುತ್ತದೆ. ತಂದೆ ನಂಬಿಕೆಯಾದರೆ, ತಾಯಿ ಸತ್ಯವಾಗುತ್ತಾಳೆ, ಇವರಿಬ್ಬರು ದೇವರಿಗೆ ಸಮಾನರು. ಇಂದಿನ ಮನುಕುಲ ವಸ್ತುಗಳ ಬಗ್ಗೆ ಹೆಚ್ಚು ಆಸಕ್ತಿ ತೋರುತ್ತಿದ್ದು, ಜೀವಮಾನದ ಮೇಲಿನ ಕಾಳಜಿ ಕಡಿಮೆಯಾಗುತ್ತಿದೆ ಎಂದು ಬಾಳೆಯಡ ಕಾಳಪ್ಪ ಬೇಸರ ವ್ಯಕ್ತಪಡಿಸಿದರು. ಇಂದು ಬಿಡುಗಡೆಯಾದ ‘ಜೇನು ಗೂಡು” ಪುಸ್ತಕ ಮನುಷ್ಯನ ಜೀವನದ ವಾಸ್ತವಕ್ಕೆ ಹತ್ತಿರವಾಗಿದೆ. ಬರವಣಿಗೆಯಲ್ಲಿ ಬಲವಿದೆ, ಪ್ರಭಾವ ಬೀರುವ ಶಕ್ತಿ ಹೊಂದಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
“ಜೇನು ಗೂಡು” ಪುಸ್ತಕದ ಬರಹಗಾರ್ತಿ ಹಂಚೆಟ್ಟಿರ ಫ್ಯಾನ್ಸಿ ಮುತ್ತಣ್ಣ ಮಾತನಾಡಿ ಸಮಾಜಕ್ಕೆ ಉತ್ತಮ ಸಂದೇಶ ನೀಡುವ ಅಂಶಗಳು ಪುಸ್ತದಲ್ಲಿದ್ದು, ಓದುಗರು ಇದನ್ನು ಗಮನಿಸಿದರೆ ನನ್ನಲ್ಲಿ ಧನ್ಯತಾಭಾವ ಮೂಡಲಿದೆ. ಪ್ರತಿಯೊಬ್ಬರು ಪುಸ್ತಕ ಕೊಂಡು ಓದಿ ಎಂದು ಮನವಿ ಮಾಡಿದರು. ಮಡಿಕೇರಿ ಕೊಡವ ಸಮಾಜದ ನಿರ್ದೇಶಕಿ ಬೊಪ್ಪಂಡ ಸರಳ ಕರುಂಬಯ್ಯ ಮಾತನಾಡಿ ಮಕ್ಕಳು ಪುಸ್ತಕಗಳನ್ನು ಹೆಚ್ಚು ಓದಬೇಕು, ಈಗಿನ ಮಕ್ಕಳು ಇಂಗ್ಲೀಷ್ ಪುಸ್ತಕಗಳನ್ನಷ್ಟೇ ಓದುವ ಹವ್ಯಾಸ ಹೊಂದಿದ್ದಾರೆ. ಇಂಗ್ಲೀಷ್ ನೊಂದಿಗೆ ಕನ್ನಡವನ್ನು ಕೂಡ ಓದಲಿ ಎಂದು ಕಿವಿಮಾತು ಹೇಳಿದರು. ನಮ್ಮ ಮನಸ್ಸಿನ ಕಲ್ಪನೆಗಳಿಗೆ ಭಾವನೆಗಳನ್ನು ತುಂಬಿ ಸಾಹಿತ್ಯದ ರೂಪ ನೀಡಲಾಗುತ್ತದೆ. ಬರವಣಿಗೆಯನ್ನು ಪುಸ್ತಕದ ರೂಪದಲ್ಲಿ ಹೊರ ತರಲು ಪ್ರೋತ್ಸಾಹ ನೀಡುತ್ತಿರುವ ಕೊಡವ ಮಕ್ಕಡ ಕೂಟದ ಸಾಹಿತ್ಯಾಸಕ್ತಿ ಮತ್ತು 108 ಪುಸ್ತಕಗಳ ಸಾಧನೆ ಶ್ಲಾಘನೀಯವೆಂದರು. ಮೂರ್ನಾಡು ಕೊಡವ ಸಮಾಜದ ಪೊಮ್ಮಕ್ಕಡ ಒಕ್ಕೂಟದ ಅಧ್ಯಕ್ಷೆ ಪಳಂಗಂಡ ರೇಖಾ ತಮ್ಮಯ್ಯ ಮಾತನಾಡಿ “ಜೇನು ಗೂಡು” ಪುಸ್ತಕದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಸಾಹಿತ್ಯಾಸಕ್ತಿ ಇನ್ನೂ ಹೆಚ್ಚಾಗಿ ಪ್ರಶಸ್ತಿಗಳು ಲಭಿಸಲಿ ಎಂದರು. ಅಧ್ಯಕ್ಷತೆ ವಹಿಸಿ ಮಾತನಾಡಿದ ಕೊಡವ ಮಕ್ಕಡ ಕೂಟದ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ಪತ್ರಕರ್ತ ಹಾಗೂ ಸಾಹಿತಿ ಐತಿಚಂಡ ರಮೇಶ್ ಉತ್ತಪ್ಪ ಅವರು ಬರೆದ ಕೊಡವ ಮಕ್ಕಡ ಕೂಟ ಹೊರತಂದ “1965ರ ಯುದ್ಧ ಹಾಗೂ ಕೊಡಗಿನ ಮಹಾವೀರ (ಮಹಾವೀರ ಪುರಸ್ಕೃತ ಸ್ಕ್ವಾ.ಲೀ ಅಜ್ಜಮಾಡ ಬಿ.ದೇವಯ್ಯ ಅವರ ಜೀವನಾಧರಿತ) ಕುರಿತಾದ ಪುಸ್ತಕ “ಸ್ಕೈ ಫೋರ್ಸ್” ಎಂಬ ಹೆಸರಿನಲ್ಲಿ ಬಾಲಿವುಡ್ ಚಿತ್ರವಾಗಿದೆ. ಈ ಚಿತ್ರ ಇದೇ ಜ.24ರಂದು ತೆರೆ ಕಾಣುತ್ತಿದ್ದು, ಇದು ಕೊಡವ ಮಕ್ಕಡ ಕೂಟದ ಹೆಗ್ಗಳಿಕೆಗೆ ಕಾರಣವಾಗಿದೆ ಮತ್ತು ಕೊಡಗು ಜಿಲ್ಲೆಗೆ ಹೆಮ್ಮೆಯ ವಿಚಾರವಾಗಿದೆ ಎಂದು ತಿಳಿಸಿದರು.
ಈಗಾಗಲೇ ಮಹತ್ವಾಕಾಂಕ್ಷೆಯ 100ನೇ ಪುಸ್ತಕವನ್ನು ಸಾಹಿತ್ಯ ಲೋಕಕ್ಕೆ ಅದ್ದೂರಿಯಾಗಿ ಸಮರ್ಪಿಸಿರುವ ಕೊಡವ ಮಕ್ಕಡ ಕೂಟ 2024 ರಲ್ಲಿ ಬರೋಬರಿ 27 ಪುಸ್ತಕಗಳನ್ನು ಬಿಡುಗಡೆ ಮಾಡಿ ಪ್ರಶಂಸೆಗೆ ಪಾತ್ರವಾಗಿದೆ. ಕೂಟ ಪ್ರಕಟಿಸಿರುವ 107 ಪುಸ್ತಕಗಳಲ್ಲಿ ಐದು ಪುಸ್ತಕಗಳಿಗೆ ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸಿದ್ದು, ಚಿಗುರೆಲೆಗಳು ಪುಸ್ತಕಕ್ಕೆ ರಾಜ್ಯ ಪ್ರಶಸ್ತಿ, ಅಗ್ನಿಯಾತ್ರೆ ಪುಸ್ತಕಕ್ಕೆ “ಗೌರಮ್ಮ ದತ್ತಿ ನಿಧಿ “ಪ್ರಶಸ್ತಿ ಲಭಿಸಿದೆ. ನಾಲ್ಕು ಪುಸ್ತಕಗಳು ಕೊಡವ ಸಿನಿಮಾವಾಗಿದೆ. ಚೆಪ್ಪುಡಿರ ಎ.ಕಾರ್ಯಪ್ಪ ಅವರು ಬರೆದ ಕೊಡಗಿನ ಕ್ರೀಡಾಪಟುಗಳ ಜೀವನ ಚರಿತ್ರೆ ಎಂಬ ದಾಖಲೀಕರಣ ಪುಸ್ತಕದ 1500 ಪ್ರತಿಗಳನ್ನು ಮುದ್ರಿಸಿ ಕೊಡಗಿನಾದ್ಯಂತ ಶಾಲಾ-ಕಾಲೇಜು ಮತ್ತು ಗ್ರಂಥಾಲಯಗಳಿಗೆ ಉಚಿತವಾಗಿ ನೀಡಲಾಗಿದೆ. ಕೊಡಗಿನ ಮಕ್ಕಳಿಗೆ ಕ್ರೀಡೆ ಮತ್ತು ಸೇನೆಯಲ್ಲಿ ಆಸಕ್ತಿ ಮೂಡಿಸುವುದು ನಮ್ಮ ಉದ್ದೇಶವಾಗಿದೆ. ಮುಂದಿನ ದಿನಗಳಲ್ಲಿ ಕೂಡ ಅಧ್ಯಯನ ಹಾಗೂ ಸಂಶೋಧನೆಗೆ ಆದ್ಯತೆ ನೀಡುವ ದಾಖಲೀಕರಣದ ಪುಸ್ತಕಗಳನ್ನು ಹೊರ ತರಲಾಗುವುದು ಎಂದು ಬೊಳ್ಳಜಿರ ಬಿ.ಅಯ್ಯಪ್ಪ ಮಾಹಿತಿ ನೀಡಿದರು. ಕೊಡವ ಮಕ್ಕಡ ಕೂಟದ ನಿರ್ದೇಶಕಿ ಹಾಗೂ ಬರಹಗಾರ್ತಿ ಕರವಂಡ ಸೀಮಾ ಗಣಪತಿ ಉಪಸ್ಥಿತರಿದ್ದರು. ಪರಿಚಯ ::: ಹಂಚೆಟ್ಟಿರ ಫ್ಯಾನ್ಸಿ ಮುತ್ತಣ್ಣ :: ಕನ್ನಡ ನಾಡಿನ ಲೇಖಕಿಯರಲ್ಲಿ ಹಂಚೆಟ್ಟಿರ ಫ್ಯಾನ್ಸಿ ಮುತ್ತಣ್ಣ ಅವರ ಹೆಸರು ಪ್ರಮುಖವಾದುದು. “ಕಾಡು ಹಕ್ಕಿಯ ಹಾಡು’ ಹಾಗೂ “ಕನವರಿಕೆ” ಎಂಬ ಕವನ ಸಂಕಲನಗಳು, “ಕಾಡಿನ ನೆನಪುಗಳು” ಒಡಲು ಉರಿ” ಕಥಾ ಸಂಕಲನ ರಚಿಸಿರುವ ಇವರು ತಮ್ಮ ಮಾತೃ ಭಾಷೆಯಾದ ಕೊಡವ ಭಾಷೆಯಲ್ಲಿ “ಪಾರು” ಎಂಬ ಕಾದಂಬರಿ ಹಾಗೂ “ಬದ್‌ಕ್‌ರ ನಡೆ” ಲೇಖನಗಳ ಸಂಗ್ರಹ “ಪೂಬಳ್ಳಿ” ಕವನ ಸಂಕಲ, “ಕೂಪದಿ” ಸಣ್ಣ ಕಥೆಗಳ ಸಂಗ್ರಹ ಹೊರತಂದಿದ್ದಾರೆ. ಇವರ “ಪಾರು” ಕೊಡವ ಕಾದಂಬರಿಗೆ ಕೊಡವ ಸಾಹಿತ್ಯ ಅಕಾಡೆಮಿಯ ರಾಜ್ಯ ಪ್ರಶಸ್ತಿ ದೊರೆತಿದೆ. ತಮ್ಮ ಮೂರನೇ ಕೃತಿಗೆ ರಾಜ್ಯ ಪ್ರಶಸ್ತಿ ಪಡೆದ ಹೆಮ್ಮೆ ಇವರದು. “ಜೇನುಗೂಡು” ಇವರ ಹತ್ತನೆಯ ಕೃತಿ. ಕೊಡಗು ಜಿಲ್ಲೆಯ ಕೊಳ್ಳಿಮಾಡ ಗಪ್ಪು ಗಣಪತಿ ಹಾಗೂ ಕೊಳ್ಳಿಮಾಡ ಲಲಿತ ಗಣಪತಿ ದಂಪತಿಗಳ ಪುತ್ರಿಯಾಗಿ ಜನಿಸಿದ ಫ್ಯಾನ್ಸಿ ಮುತ್ತಣ್ಣ ಅವರು ಪೊನ್ನಂಪೇಟೆಯಲ್ಲಿ ಪ್ರಾಥಮಿಕ, ಪ್ರೌಢ ಹಾಗೂ ಪದವಿಪೂರ್ವ ಶಿಕ್ಷಣ ಪಡೆದರು. ಕವಯತ್ರಿಯಾಗಿ, ಕಥೆಗಾರ್ತಿಯಾಗಿ ಹಾಗೂ ಲೇಖಕಿಯಾಗಿ ಈಗಾಗಲೇ ಅಪಾರ ಸಹೃದಯರ ಮನಸೆಳೆದಿರುವ ಶ್ರೀಮತಿ ಫ್ಯಾನ್ಸಿ ಮುತ್ತಣ್ಣ ಅವರು ಗ್ರಾಮಾಂತರ ಬುದ್ದಿಜೀವಿಗಳ ಬಳಗದಿಂದ “ವಿಶ್ವಮಾನ್ಯ ಕನ್ನಡಿಗ ಪ್ರಶಸ್ತಿ”, ಜಯ ಕರ್ನಾಟಕ ಪ್ರಶಸ್ತಿ ಹಾಗೂ ಜೆ.ಸಿ.ಸಾಹಿತ್ಯರತ್ನ ಪ್ರಶಸ್ತಿ, ಶಿವರಾಮ ಕಾರಂತ ಪ್ರಶಸ್ತಿ, ವಿಜಯ ರಾಘವ ಚಾರಿಟೇಬಲ್ ಟ್ರಸ್ಟ್ ಧರ್ಮದರ್ಶಿಯವರ ಧತ್ತಿನಿಧಿ ಪ್ರಶಸ್ತಿ ಹಾಗೂ ಅಂತರಾಷ್ಟ್ರೀಯ ಪ್ರತಿಷ್ಟಿತ ಗ್ಲೋಬಲ್ ಅಚೀವರ್ಸ್ ಪ್ರಶಸ್ತಿಗೂ ಪಾತ್ರರಾಗಿದ್ದಾರೆ. ಇವರಿಗೆ ಕೊಡವ ಸಾಹಿತ್ಯ ಅಕಾಡೆಮಿ, ಕನ್ನಡ ಸಾಹಿತ್ಯ ಪರಿಷತ್ತ್, ಕರ್ನಾಟಕ ಜಾನಪದ ಪರಿಷತ್ತಿನಲ್ಲಿ ಸೇವೆ ಮಾಡಿದ ಅನುಭವವಿದೆ.

Share. Facebook Twitter Pinterest LinkedIn Tumblr Email WhatsApp
Previous Article*ಮಡಿಕೇರಿ : ಜ.14 ಮತ್ತು 15 ಶ್ರೀ ರಾಜರಾಜೇಶ್ವರಿ ಕ್ಷೇತ್ರದ ಪುನರ್ ಪ್ರತಿಷ್ಠಾ ವಾರ್ಷಿಕೋತ್ಸವ*
Next Article *ಬೆಳ್ಳಿ ಪರದೆಯ ಮೇಲೆ ಮೂಡಿ ಬರುತ್ತಿದೆ ಸ್ಕ್ವಾಡ್ರನ್‌ ಲೀಡರ್ ಅಜ್ಜಮಾಡ ದೇವಯ್ಯ ಸಾಹಸಗಾಥೆ : ಜ.24 ರಂದು ಬಾಲಿವುಡ್ ಸಿನಿಮಾ “ಸ್ಕೈ ಫೋರ್ಸ್” ಬಿಡುಗಡೆ*

Related Posts

ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ಮಡಿಕೇರಿ, NEWS DESK ಫೆ.11 : ದಕ್ಷಿಣ ಕೊಡಗಿನ ಪೊನ್ನಂಪೇಟೆ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ನಿರಂತರವಾಗಿ ಜಾನುವಾರುಗಳ ಮೇಲೆ ದಾಳಿ…

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*

February 11, 2026

*ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*

February 11, 2026

*ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*

February 11, 2026

*ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*

February 11, 2026

*ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*

February 11, 2026

*ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*

February 11, 2026

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*

February 11, 2026

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

February 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.