ಮಡಿಕೇರಿ ಜ.13 NEWS DESK : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಸುದರ್ಶನ ಬಳಿ ಇರುವ ಪರಿಷತ್ತಿನ ನಿವೇಶನದಲ್ಲಿ ಕನ್ನಡ ಸಾಹಿತ್ಯ ಭವನ ನಿರ್ಮಾಣದ ಸಲುವಾಗಿ ಕರ್ನಾಟಕ ಸರಕಾರದ ಲೋಕೋಪಯೋಗಿ ಸದ ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಪದಾಧಿಕಾರಿಗಳು ಜಿಲ್ಲಾಧ್ಯಕ್ಷ ಎಂ.ಪಿ ಕೇಶವ ಕಾಮತ್ ಅವರ ನೇತೃತ್ವದಲ್ಲಿ ಭೇಟಿಯಾಗಿ ಭವನ ನಿರ್ಮಾಣ ಕಾರ್ಯದಲ್ಲಿ ತಮ್ಮ ಇಲಾಖೆ ವತಿಯಿಂದ ಅನುದಾನ ನೀಡಿ ಭವನ ನಿರ್ಮಾಣದ ಕಾರ್ಯದಲ್ಲಿ ಸಹಕರಿಸುವಂತೆ ಕೋರಿಕೊಂಡರು. ಪ್ರತಿಕ್ರಿಯಿಸಿದ ಸಚಿವರು ಸಾಹಿತ್ಯ ಪರಿಷತ್ತಿನ ಭವನಕ್ಕೆ ಸಂಪೂರ್ಣ ಸಹಕಾರ ನೀಡುವುದರೊಂದಿಗೆ ಇಲಾಖೆಯಿಂದ ನೀಡಬಹುದಾದ ಅನುದಾನದ ವ್ಯವಸ್ಥೆ ಮಾಡುವುದಾಗಿ ನುಡಿದರು. ಈ ಸಂದರ್ಭ ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮತ್ತು ಗ್ಯಾರಂಟಿ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷ ಧರ್ಮಜಾ ಉತ್ತಪ್ಪ ಉಪಸ್ಥಿತರಿದ್ದರು. ಅವರನ್ನು ಭೇಟಿಯಾದ ನಿಯೋಗದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಸಮಿತಿ ನಿರ್ದೇಶಕರಾದ ವಿ.ಟಿ.ಮಂಜುನಾಥ್ ಉಪಸ್ಥಿತರಿದ್ದರು.