ಮಡಿಕೇರಿ ಜ.13 NEWS DESK : ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಸಮಿತಿಯ ಉಪಾಧ್ಯಕ್ಷರನ್ನಾಗಿ ಓ.ಎಮ್ ಅಬ್ದುಲ್ ಸಲಾಂ ನೇಮಕಗೊಂಡಿದ್ದಾರೆ. ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ, ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ವಿ.ಪಿ.ಶಶಿಧರ್ ಶಿಫಾರಸ್ಸಿನ ಮೇರೆಗೆ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಪಿ.ಎ ಹನೀಫ್ ಅವರ ನಿರ್ದೇಶನದಂತೆ ತಕ್ಷಣದಿಂದ ಜಾರಿಗೆ ಬರುವಂತೆ ನಲ್ವತೇಕರೆ ನಿವಾಸಿ ಓ.ಎಮ್ ಅಬ್ದುಲ್ ಸಲಾಂ ಅವರನ್ನು ನೇಮಕ ಮಾಡಲಾಗಿದೆ ಎಂದು ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಅಬ್ದುಲ್ ರಜಾಕ್ ಆದೇಶ ನೀಡಿದ್ದಾರೆ.