ಗುಡಿಬಂಡೆ NEWS DESK ಜ.13 : ನಿಯಂತ್ರಣ ಕಳೆದುಕೊಂಡ ಕಾರು ಕೆರೆಕಟ್ಟೆಗೆ ಡಿಕ್ಕಿ ಹೊಡೆದ ಪರಿಣಾಮ ಪತ್ರಕರ್ತರೊಬ್ಬರು ಮೃತಪಟ್ಟಿರುವ ಘಟನೆ ಗುಡಿಬಂಡೆ ತಾಲೂಕಿನ ಮಾಚಹಳ್ಳಿ ಗ್ರಾಮದಲ್ಲಿ ನಡೆದಿದೆ.
ಪತ್ರಕರ್ತ ಭರತ್ (34) ಸಾವನ್ನಪ್ಪಿರುವ ದುರ್ದೈವಿ. ಫೆ.7ರಂದು ನಡೆಯಬೇಕಾಗಿದ್ದ ತಮ್ಮ ಮಗುವಿನ ನಾಮಕರಣಕ್ಕಾಗಿ ಗುಡಿಬಂಡೆಯಲ್ಲಿ ಭವನವನ್ನು ಖಾತ್ರಿ ಪಡಿಸಿಕೊಂಡು ಬಾಗೇಪಲ್ಲಿಗೆ ಮರಳುತಿದ್ದಾಗ ನಿಯಂತ್ರಣ ಕಳೆದುಕೊಂಡ ಕಾರು ಮಾಚಹಳ್ಳಿ ಕೆರೆಕಟ್ಟೆಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಭರತ್ ತಲೆಗೆ ತೀವ್ರ ಗಾಯಗಳಾಗಿದ್ದು, ಗುಡಿಬಂಡೆ ಆಸ್ಪತ್ರೆಗೆ ಕರೆದೊಯ್ದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು ಎಂದು ತಿಳಿದು ಬಂದಿದೆ.
ಮೃತರು ಪತ್ನಿ ಹಾಗೂ ಒಂದು ವರ್ಷದ ಪುತ್ರಿಯನ್ನು ಅಗಲಿದ್ದಾರೆ.