ಮಡಿಕೇರಿ ಜ.13 NEWS DESK : ಹೊದ್ದೂರು ಗ್ರಾಮ ಪಂಚಾಯಿತಿಗೆ ಚಿತ್ರದುರ್ಗ ಜಿಲ್ಲೆಯ ಕೂನಬೇವು ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಅಭಿವೃದ್ಧಿ ಅಧಿಕಾರಿ,ಸಿಬ್ಬಂದಿ ವರ್ಗ ಭೇಟಿ ನೀಡಿ ಗ್ರಾಮ ಪಂಚಾಯಿತಿ ಆಡಳಿತ ವ್ಯವಸ್ಥೆಯನ್ನು ಶ್ಲಾಘಿಸಿದರು. ಈ ಸಂದರ್ಭ ಮಾತನಾಡಿದ ಕೂನಬೇವು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಧನಂಜಯ ಇಡೀ ರಾಜ್ಯಕ್ಕೆ ಹೊದ್ದೂರು ಗ್ರಾ.ಪಂ ಆಡಳಿತ ವ್ಯವಸ್ಥೆ ಮಾದರಿಯಾಗಿದೆ. ಹೊದ್ದೂರು ಗ್ರಾಮ ಪಂಚಾಯಿತಿ ಅಧ್ಯಕ್ಷರು ಮತ್ತು ಅಭಿವೃದ್ಧಿ ಅಧಿಕಾರಿ ನೇತೃತ್ವದಲ್ಲಿ ಉತ್ತಮ ಆಡಳಿತ ವ್ಯವಸ್ಥೆ ನಡೆಯುತ್ತಿರುವುದು ಹೆಮ್ಮೆಯ ವಿಷಯ. ಹೊದ್ದೂರು ಗ್ರಾಮ ಪಂಚಾಯಿತಿಯಲ್ಲಿ ಅಳವಡಿಸಿಕೊಂಡಿರುವ ಆಡಳಿತ ಕ್ರಮಗಳು, ಪಾರದರ್ಶಕತೆ, ಸಹಕಾರ ಮನೋಭಾವ ತುಂಬಾ ಶ್ಲಾಘನೀಯ. ಹೊದ್ದೂರು ಗ್ರಾಮ ಪಂಚಾಯಿತಿ ತೆಗೆದುಕೊಂಡಿರುವ ಜನಪರ ಕಾಳಜಿಯ ಆಡಳಿತವನ್ನು ಇತರೆ ಗ್ರಾಮ ಪಂಚಾಯಿತಿಗಳು ಕೂಡ ಅಳವಡಿಸಿಕೊಳ್ಳಬೇಕಾಗಿದೆ ಎಂದು ಅವರು ಹೇಳಿದರು. ಈ ಸಂದರ್ಭ ಗ್ರಾಮ ಪಂಚಾಯಿತಿ ಅಧ್ಯಕ್ಷ ಹೆಚ್.ಎ.ಹಂಸ ಕೊಟ್ಟಮುಡಿ, ಅಭಿವೃದ್ಧಿ ಅಧಿಕಾರಿ ಅಬ್ದುಲ್ಲಾ, ಗ್ರಾ.ಪಂ ಸದಸ್ಯರು ಮತ್ತು ಸಿಬ್ಬಂದಿಗಳು ಹಾಜರಿದ್ದರು.