Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡಗು : ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಡಾ.ಸಹನಾ ಎಸ್.ಹಾದಿಮನಿ ಅಧಿಕಾರ ಸ್ವೀಕಾರ*
  • *ಅಹೋರಾತ್ರಿ ಪ್ರತಿಭಟನೆ ಅರ್ಥಹೀನ : ಮಾದಾಪುರ ಗ್ರಾ.ಪಂ ವ್ಯಾಪ್ತಿಯ ಬಡವರಿಗೆ ನಿವೇಶನ ನೀಡಲು ಆಗ್ರಹ*
  • *ಕೊಡಗು ಪ್ರಶಿಕ್ಷಣ ವರ್ಗ ಕಾರ್ಯಕ್ರಮ : ನಿರ್ದಿಷ್ಟ ಗುರಿ ಹೊಂದಿರುವ‌ ನಮ್ಮ ಪಕ್ಷ ಇತರೆ ಪಕ್ಷಗಳಿಗಿಂತ ಭಿನ್ನವಾಗಿದೆ : ಸಂಸದ ಯದುವೀರ್*
  • *ಐಸಿಎಸ್‌ಇ 10 ನೇ ತರಗತಿ ಪರೀಕ್ಷೆಯಲ್ಲಿ ಅಧೃತ್ ಶರ್ಮ ಕೊಡಗಿಗೆ ಪ್ರಥಮ*
  • *ಇಂಟರ್ ಗೆಲ್ ಫೈಟಿಂಗ್ ಚಾಂಪಿಯನ್ ಶಿಪ್ : ಪದಕ ಗೆದ್ದ ವಿದ್ಯಾರ್ಥಿಗಳು*
  • *ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*
  • *ಮೇ 12 ರಂದು ಉದ್ಯೋಗ ಮೇಳ*
  • *ಹುದ್ದೆಗೆ ಅರ್ಜಿ ಆಹ್ವಾನ*
  • *ಮೇ 10 ರಂದು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ
  • *ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದ ಸಂಸದ ಯದುವೀರ್‌ ಒಡೆಯರ್‌*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಗಣರಾಜ್ಯೋತ್ಸವ : ಅಗತ್ಯ ಸಿದ್ಧತೆಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಗಣರಾಜ್ಯೋತ್ಸವ : ಅಗತ್ಯ ಸಿದ್ಧತೆಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚನೆ*

ಜನವರಿ 13, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜ.13 NEWS DESK : ಇದೇ ಜ.26 ರಂದು ನಡೆಯುವ ಗಣರಾಜ್ಯೋತ್ಸವಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ರಾಷ್ಟ್ರೀಯ ಹಬ್ಬವಾದ ಗಣರಾಜ್ಯೋತ್ಸವವನ್ನು ಜವಾಬ್ದಾರಿಯುತವಾಗಿ ಆಚರಿಸಬೇಕು. ಕಳೆದ ಬಾರಿಯಂತೆ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ವೇದಿಕೆ ನಿರ್ಮಿಸುವಂತೆ ಸಂಬಂಧಪಟ್ಟ ಎಂಜಿನಿಯರ್‍ಗಳಿಗೆ ಸೂಚಿಸಿದರು. ಸಾಂಸ್ಕøತಿಕ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಡೆಸಬೇಕು. ಹೊಸ ಹೊಸ ತಂಡಗಳಿಗೆ ಅವಕಾಶ ಮಾಡುವಂತೆ ಜಿಲ್ಲಾಧಿಕಾರಿ ಸಲಹೆ ನೀಡಿದರು. ಸರ್ಕಾರಿ ಹಾಗೂ ಬಾಲಕ ಮತ್ತು ಬಾಲಕಿಯರ ಬಾಲಮಂದಿರದ ವಿದ್ಯಾರ್ಥಿಗಳಿಗೆ ಅವಕಾಶ ಮಾಡಬೇಕು. ತಮ್ಮ ತಮ್ಮ ಕಚೇರಿಗಳಲ್ಲಿ ಅಂದು(ಜ.26) ಬೆಳಗ್ಗೆ 8 ಗಂಟೆಗೆ ಧ್ವಜಾರೋಹಣ ಮಾಡಿ 8.45 ಗಂಟೆಗೆ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣಕ್ಕೆ ಹಾಜರಾಗಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು. ರಾಷ್ಟ್ರ ಹಾಗೂ ರಾಜ್ಯ ಮಟ್ಟದಲ್ಲಿ ಪ್ರಶಸ್ತಿ ಪಡೆದ ಹಾಗೂ ವಿಶಿಷ್ಟ ಸಾಧನೆ ಮಾಡಿರುವವರನ್ನು ಗುರುತಿಸಿ ಜ.18 ರೊಳಗೆ ಮಾಹಿತಿ ನೀಡುವಂತಾಗಬೇಕು. ಲ್ಯಾಪ್‍ಟಾಪ್ ವಿತರಣೆ ಮತ್ತಿತರ ಮಾಹಿತಿ ಒದಗಿಸುವಂತೆ ಸಂಬಂಧಪಟ್ಟ ಇಲಾಖಾ ಅಧಿಕಾರಿಗಳಿಗೆ ಅವರು ನಿರ್ದೇಶನ ನೀಡಿದರು. ಹಬ್ಬದ ವಾತಾವರಣದಲ್ಲಿ ಗಣರಾಜ್ಯೊತ್ಸವವನ್ನು ಆಚರಿಸುವಂತಾಗಬೇಕು. ಮಾಜಿ ಸೈನಿಕರನ್ನು ಆಹ್ವಾನಿಸುವುದು ಸೇರಿದಂತೆ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಸಲಹೆ ನೀಡಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಮಾತನಾಡಿ ಪಥಸಂಚಲನಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗುವುದು. ಗಣರಾಜ್ಯೋತ್ಸವ ಸಂಬಂಧ ಎಲ್ಲಾ ರೀತಿಯ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು. ಸ್ಕೌಟ್ಸ್ ಮತ್ತು ಗೈಡ್ಸ್‍ನ ಜಿಲ್ಲಾ ಸಂಘಟಕರಾದ ದಮಯಂತಿ ಮಾತನಾಡಿ, ಗಣರಾಜ್ಯೋತ್ಸವ ಪೂರ್ವಭಾವಿಯಾಗಿ ಪ್ರಾತ್ಯಕ್ಷಿಕೆಯನ್ನು ಏರ್ಪಡಿಸಲಾಗುತ್ತಿದ್ದು, ಪ್ರಥಮ ಚಿಕಿತ್ಸೆಗೆ ವ್ಯವಸ್ಥೆ ಮಾಡಬೇಕು ಎಂದು ಕೋರಿದರು. ಭಾರತ್ ಸೇವಾದಳದ ಮೋಂತಿ ಗಣೇಶ್ ಮಾತನಾಡಿ, ಭಾರತ ಸೇವಾದಳ ವತಿಯಿಂದ ಧ್ವಜಾರೋಹಣ ಸಂಬಂಧ ಹಲವು ಮಾಹಿತಿ ನೀಡಲಾಗುವುದು ಎಂದು ಹೇಳಿದರು. ಪ್ರೊಬೆಸನರ್ ಐಪಿಎಸ್ ಬೆನಕ ಪ್ರಸಾದ್, ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ, ನಗರಾಭಿವೃದ್ಧಿ ಯೋಜನಾ ಶಾಖೆಯ ಯೋಜನಾ ನಿರ್ದೇಶಕರಾದ ಬಿ.ಬಸಪ್ಪ, ಜಿ.ಪಂ.ಉಪಕಾರ್ಯದರ್ಶಿ ಎಸ್.ಧನರಾಜ್, ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಸಿ.ರಂಗಧಾಮಪ್ಪ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರಾದ ಶೇಖರ್, ಐಟಿಡಿಪಿ ಇಲಾಖಾ ಅಧಿಕಾರಿ ಎಸ್.ಹೊನ್ನೇಗೌಡ, ಪಶುಪಾಲನಾ ಇಲಾಖೆ ಉಪ ನಿರ್ದೇಶಕರಾದ ಲಿಂಗರಾಜ ದೊಡ್ಡಮನಿ, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕರಾದ ಯೋಗೇಶ್, ಪ್ರವಾಸೋದ್ಯಮ ಇಲಾಖೆ ಉಪ ನಿರ್ದೇಶಕರಾದ ಅನಿತಾ ಭಾಸ್ಕರ್, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಮಂಜುಳ, ಪೌರಾಯುಕ್ತರಾದ ಎಚ್.ಆರ್.ರಮೇಶ್, ಜಿ.ಪಂ.ಎಂಜಿನಿಯರ್ ನಾಯಕ್, ಪಿಎಂಜಿಎಸ್‍ವೈ ಎಂಜಿನಿಯರ್ ಪ್ರಭು, ಕ್ಷೇತ್ರ ಶಿಕ್ಷಣಾಧಿಕಾರಿ ದೊಡ್ಡೇಗೌಡ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ವಿ.ಟಿ.ವಿಸ್ಮಯಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಾದ ಕುಮಾರ, ಬಿಸಿಎಂ ಇಲಾಖೆ ವ್ಯವಸ್ಥಾಪಕರಾದ ಶಿವಶಂಕರ ವಿವಿಧ ನಿಗಮದ ವ್ಯವಸ್ಥಾಪಕರು, ಇತರರು ಇದ್ದರು.

ವಿವಿಧ ಮಹನೀಯರ ಜಯಂತಿ ಆಚರಣೆ ಬಗ್ಗೆ ಪೂರ್ವಭಾವಿ ಸಭೆ: ಇದೇ ಜನವರಿ, 19 ರಂದು ಮಹಾಯೋಗಿ ವೇಮನ ಜಯಂತಿ, ಜ.21 ರಂದು ಅಂಬಿಗರ ಚೌಡಯ್ಯ ಜಯಂತಿ, ಫೆಬ್ರವರಿ, 01 ರಂದು ಮಡಿವಾಳ ಮಾಚಿದೇವ ಜಯಂತಿ ಹಾಗೂ ಫೆಬ್ರವರಿ, 05 ರಂದು ಸವಿತಾ ಮಹರ್ಷಿ ಜಯಂತಿ ಆಚರಣೆ ಸಂಬಂಧ ಪೂರ್ವಭಾವಿ ಸಭೆಯು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆಯು ಇತ್ತೀಚೆಗೆ ನಡೆಯಿತು. ಸರ್ಕಾರದ ನಿರ್ದೇಶನದಂತೆ ವಿವಿಧ ಜಯಂತಿಗಳನ್ನು ಆಚರಿಸಲಾಗುತ್ತಿದ್ದು, ಸಮಾಜದ ಪ್ರಮುಖರು ಜಯಂತಿ ಆಚರಣೆಗೆ ಜಿಲ್ಲಾಡಳಿತದ ಜೊತೆ ಕೈಜೋಡಿಸುವಂತೆ ಜಿಲ್ಲಾಧಿಕಾರಿ ಅವರು ಕೋರಿದರು. ಈ ಸಂದರ್ಭದಲ್ಲಿ ಸಮಾಜದ ಪ್ರಮುಖರು ಜಯಂತಿ ಆಚರಣೆ ಸಂಬಂಧ ಹಲವು ಸಲಹೆ ನೀಡಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡಗು : ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಡಾ.ಸಹನಾ ಎಸ್.ಹಾದಿಮನಿ ಅಧಿಕಾರ ಸ್ವೀಕಾರ*

ಮೇ 11, 2026

*ಅಹೋರಾತ್ರಿ ಪ್ರತಿಭಟನೆ ಅರ್ಥಹೀನ : ಮಾದಾಪುರ ಗ್ರಾ.ಪಂ ವ್ಯಾಪ್ತಿಯ ಬಡವರಿಗೆ ನಿವೇಶನ ನೀಡಲು ಆಗ್ರಹ*

ಮೇ 11, 2026

*ಕೊಡಗು ಪ್ರಶಿಕ್ಷಣ ವರ್ಗ ಕಾರ್ಯಕ್ರಮ : ನಿರ್ದಿಷ್ಟ ಗುರಿ ಹೊಂದಿರುವ‌ ನಮ್ಮ ಪಕ್ಷ ಇತರೆ ಪಕ್ಷಗಳಿಗಿಂತ ಭಿನ್ನವಾಗಿದೆ : ಸಂಸದ ಯದುವೀರ್*

ಮೇ 11, 2026

*ಅಹೋರಾತ್ರಿ ಪ್ರತಿಭಟನೆ ಅರ್ಥಹೀನ : ಮಾದಾಪುರ ಗ್ರಾ.ಪಂ ವ್ಯಾಪ್ತಿಯ ಬಡವರಿಗೆ ನಿವೇಶನ ನೀಡಲು ಆಗ್ರಹ*

ಮೇ 11, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಮೇ 11 : ಸೋಮವಾರಪೇಟೆ ತಾಲ್ಲೂಕಿನ ಮಾದಾಪುರ ಗ್ರಾ.ಪಂ ವ್ಯಾಪ್ತಿಯ ಕುಂಬೂರು ಗ್ರಾಮದಲ್ಲಿ ಲಭ್ಯವಿರುವ ಪೈಸಾರಿ…

*ಕೊಡಗು ಪ್ರಶಿಕ್ಷಣ ವರ್ಗ ಕಾರ್ಯಕ್ರಮ : ನಿರ್ದಿಷ್ಟ ಗುರಿ ಹೊಂದಿರುವ‌ ನಮ್ಮ ಪಕ್ಷ ಇತರೆ ಪಕ್ಷಗಳಿಗಿಂತ ಭಿನ್ನವಾಗಿದೆ : ಸಂಸದ ಯದುವೀರ್*

ಮೇ 11, 2026

*ಐಸಿಎಸ್‌ಇ 10 ನೇ ತರಗತಿ ಪರೀಕ್ಷೆಯಲ್ಲಿ ಅಧೃತ್ ಶರ್ಮ ಕೊಡಗಿಗೆ ಪ್ರಥಮ*

ಮೇ 10, 2026

*ಇಂಟರ್ ಗೆಲ್ ಫೈಟಿಂಗ್ ಚಾಂಪಿಯನ್ ಶಿಪ್ : ಪದಕ ಗೆದ್ದ ವಿದ್ಯಾರ್ಥಿಗಳು*

ಮೇ 10, 2026

*ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*

ಮೇ 9, 2026

*ಮೇ 12 ರಂದು ಉದ್ಯೋಗ ಮೇಳ*

ಮೇ 9, 2026

*ಹುದ್ದೆಗೆ ಅರ್ಜಿ ಆಹ್ವಾನ*

ಮೇ 9, 2026

*ಮೇ 10 ರಂದು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ

ಮೇ 9, 2026

*ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದ ಸಂಸದ ಯದುವೀರ್‌ ಒಡೆಯರ್‌*

ಮೇ 9, 2026

*ಎನ್‍ಡಿಎ ಫಲಿತಾಂಶ ಪ್ರಕಟ : ಕ್ರಿಯೇಟಿವ್ ಕಾಲೇಜಿನ 4 ಮಂದಿ ವಿದ್ಯಾರ್ಥಿಗಳು ಆಯ್ಕೆ*

ಮೇ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.