ಮಡಿಕೇರಿ ಜ.13 NEWS DESK : ಕರ್ನಾಟಕ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ 2002 ನವೆಂಬರ್, 4 ರಂದು ಕೊಡಗು ಜಿಲ್ಲಾ ಶಿಶು ಕಲ್ಯಾಣ ಸಂಸ್ಥೆಯಲ್ಲಿ ಪ್ರಾರಂಭಗೊಂಡ ಸಾಂತ್ವನ ಮಹಿಳಾ ಸಹಾಯವಾಣಿ ಕೊಡಗಿನಾದ್ಯಂತ ಸಮಾಜದ ನೊಂದ ಮಹಿಳೆಯರು ಪ್ರತಿಯೊಂದು ಸ್ತರದಲ್ಲಿ ಎದುರಿಸುತ್ತಿರುವ ಹಲವಾರು ಸಮಸ್ಯೆಗಳನ್ನು ದಾಖಲಿಸಿಕೊಂಡು ತಕ್ಷಣಕ್ಕೆ ಸರಿಯಾದ ಸಲಹೆ ಸೂಚನೆಗಳನ್ನು ನೀಡಿ ನೆರವು ಕಲ್ಪಿಸುತ್ತಾ ಬಂದಿರುತ್ತದೆ. ಸಾಂತ್ವನ ಕೇಂದ್ರದಲ್ಲಿ ಈವರೆಗೆ 5306 ವಿವಿಧ ಸ್ವರೂಪದ ಪ್ರಕರಣಗಳು ದಾಖಲಾಗಿದ್ದು, 5316 ಪ್ರಕರಣಗಳು ಇತ್ಯರ್ಥಗೊಂಡಿದೆ. 2024-25 ನೇ ಆರ್ಥಿಕ ಸಾಲಿನಲ್ಲಿ 198 ಪ್ರಕರಣಗಳು ದಾಖಲಾಗಿ 188 ಪ್ರಕರಣಗಳು ಇತ್ಯರ್ಥಗೊಂಡು ಹಿಂದಿನ ಸಾಲಿನ ಉಳಿಕೆ ಪ್ರಕರಣಗಳು ಸೇರಿ, ಉಳಿದ 10 ಪ್ರಕರಣಗಳು ಇತ್ಯರ್ಥದ ಹಂತದಲ್ಲಿರುತ್ತದೆ. ಈವರೆಗೆ ವಿವಿಧ ಸ್ವರೂಪದ ಪ್ರಕರಣಗಳಿಗೆ ಸಂಬಂಧಿಸಿದಂತೆ ಒಟ್ಟು 10,5,000 ರೂ. ಗಳನ್ನು ಸಾಂತ್ವನ ಕೇಂದ್ರ ಹಾಗೂ ನ್ಯಾಯಾಲಯದ ಮೂಲಕ ಫಲಾನುಭವಿಗಳಿಗೆ 2024-25 ನೇ ಸಾಲಿನಲ್ಲಿ ಕೊಡಿಸಲಾಗಿದೆ. ಮಹಿಳಾ ಸಹಾಯವಾಣಿಯ ಪ್ರಯೋಜನವನ್ನು ಪಡೆದುಕೊಳ್ಳುವಂತೆ ಸಾಂತ್ವನ ಕೇಂದ್ರದ ಅಧ್ಯಕ್ಷರಾದ ಕೆ.ಎಸ್.ಪ್ರಕಾಶ್ ಹಾಗೂ ಪ್ರಧಾನ ಕಾರ್ಯದರ್ಶಿ ನಮಿತ ಆರ್.ರೈ ಕೋರಿದ್ದಾರೆ. ಹೆಚ್ಚಿನ ಮಾಹಿತಿಗೆ ದೂ. ಸಂ.9880985939 ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಸಾಂತ್ವನ ಕೇಂದ್ರದ ಅಧ್ಯಕ್ಷರಾದ ಕೆ.ಎಸ್.ಪ್ರಕಾಶ್ ತಿಳಿಸಿದ್ದಾರೆ.