ಸೋಮವಾರಪೇಟೆ ಜ.14 NEWS DESK : ಸ್ವಾಮಿ ವಿವೇಕಾನಂದ ಜಯಂತ್ಯೋತ್ಸವ ಸಮಿತಿ ವತಿಯಿಂದ ಪಟ್ಟಣದ ವಿವೇಕಾನಂದ ವೃತ್ತದಲ್ಲಿ ವಿವೇಕಾನಂದರ ಜನ್ಮ ದಿನಾಚರಣೆ ಕಾರ್ಯಕ್ರಮ ನಡೆಯಿತು. ಮಾಜಿ ಸಚಿವ ಎಂ.ಪಿ.ಅಪ್ಪಚ್ಚುರಂಜನ್ ವಿವೇಕಾನಂದ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು, ಸ್ವಾಮಿ ವಿವೇಕಾನಂದರ ಜೀವನಾದರ್ಶಗಳು ಎಲ್ಲರಿಗೂ ಬದುಕಿನ ಮಾರ್ಗವಾಗಬೇಕು. ಸ್ವಾತಂತ್ರ್ಯ ಪೂರ್ವದಲ್ಲಿಯೇ ಯುವಕರಿಗೆ ಸ್ಫೂರ್ತಿ ತುಂಬಿದ ವಿವೇಕಾನಂದರು, ಭಾರತದ ಸಂಸ್ಕøತಿ, ಆಚಾರ-ವಿಚಾರವನ್ನು ಹೊರ ದೇಶದಲ್ಲೂ ಪಸರಿಸಿದ ಮಹಾನ್ ಸಂತ ಎಂದು ಬಣ್ಣಿಸಿದರು. ತಾನು ಸಚಿವನಾಗಿದ್ದ ಸಂದರ್ಭ ವಿವೇಕಾನಂದರ 150ನೇ ಜಯಂತಿಯಂದು ರಾಜ್ಯಾದ್ಯಂತ ಪ್ರತಿ ತಾಲ್ಲೂಕು ಮಟ್ಟದಲ್ಲಿ ಯುವ ದಿನವನ್ನಾಗಿ ಆಚರಣೆ ಮಾಡಲು ನಿರ್ದೇಶನ ನೀಡಲಾಗಿತ್ತು. ಆ ಮೂಲಕ ವಿವೇಕಾನಂದರ ಬಗ್ಗೆ ಎಲ್ಲರಿಗೂ ಪ್ರೇರಣೆ ನೀಡುವ ಕೆಲಸ ಮಾಡಲಾಗಿತ್ತು ಎಂದು ಸ್ಮರಿಸಿದ ಅವರು, ಮುಂದಿನ ಪ್ರಜೆಗಳಾದ ವಿದ್ಯಾರ್ಥಿಗಳು ವಿವೇಕಾನಂದರ ಆದರ್ಶಗಳನ್ನು ಮೈಗೂಡಿಸಿಕೊಂಡು, ಭಾರತದ ಆಚಾರ, ವಿಚಾರ ಸಂಸ್ಕøತಿಯನ್ನು ಉಳಿಸುವ ಕೆಲಸ ಮಾಡಬೇಕು. ದೇಶಕ್ಕೆ ಉತ್ತಮ ಪ್ರಜೆಗಳಾಗಿ ರೂಪುಗೊಳ್ಳಬೇಕೆಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು. ಕಾರ್ಯಕ್ರಮದಲ್ಲಿ ಸಮಿತಿಯ ಅಧ್ಯಕ್ಷ ಪಿ.ಕೆ.ರವಿ, ಕಾರ್ಯದರ್ಶಿ ಎಸ್.ಮಹೇಶ್, ಪ್ರಮುಖರಾದ ಕೆ.ಡಿ.ಬಿದ್ದಪ್ಪ, ಡಿ.ಪಿ.ರಮೇಶ್, ಯಶ್‍ವಂತ್, ಶಶಿಧರ್, ಪ.ಪಂ ಸದಸ್ಯ ಬಿ.ಆರ್. ಮೃತ್ಯುಂಜಯ, ಜಿ.ಪಂ.ಮಾಜಿ ಅಧ್ಯಕ್ಷ ಬಿ.ಶಿವಪ್ಪ, ದೊಡ್ಡಮಳ್ತೆ ಗ್ರಾ.ಪಂ ಸದಸ್ಯ ರುದ್ರಪ್ಪ ಲೋಹಿತ್, ಸೇರಿದಂತೆ ಸಾಂದೀಪನಿ ಶಾಲೆಯ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಸಾರ್ವಜನಿಕರು ಇದ್ದರು.