ಸುಂಟಿಕೊಪ್ಪ ಜ.14 NEWS DESK : ಪೊಂಗಲ್ ಸಮಿತಿ ವತಿಯಿಂದ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ಪೊಂಗಲ್ (ಮಕರಸಂಕ್ರಾಂತಿ) ಹಬ್ಬವನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಿದರು. ಮುಂಜಾನೆ ಮಧುರಮ್ಮ ಬಡಾವಣೆಯಲ್ಲಿರುವ ವೃಕ್ಷೋದ್ಭವ ಗಣಪತಿ ದೇವಾಲಯದಲ್ಲಿ ಮಹಿಳೆಯರು ಪೂರ್ಣಕುಂಭ ಕಳಸಕ್ಕೆ ವಿಶೇಷ ಪೂಜೆಯನ್ನು ನೇರವೇರಿಸಿದರು. ದೆವಾಲಯದ ಟ್ರಸ್ಟಿ, ಸಮಿತಿ ಕಾರ್ಯದರ್ಶಿ ಎ.ಲೋಕೇಶ್ ಕುಮಾರ್ ಪೂರ್ಣಕುಂಭ ಕಳಸವನ್ನು ಹೊತ್ತು ಕೊಡುವ ಮೂಲಕ ಮೆರವಣಿಗೆಗೆ ಚಾಲನೆ ನೀಡಿದರು. ನಂತರ ನಾದಸ್ವರದೊಂದಿಗೆ ಮುಖ್ಯ ಬೀದಿಗಳಲ್ಲಿ ಮೆರವಣಿಗೆ ನಡೆಸಿ ರಾಮ ಮಂದಿರ, ಅಯ್ಯಪ್ಪ ದೇವಾಲಯಗಳಿಗೆ ತೆರಳಿ ಪೂಜೆಯನ್ನು ಸಲ್ಲಿಸಿ ನಂತರ ಶ್ರೀ ಚಾಮುಂಡೇಶ್ವರಿ, ಮುತ್ತಪ್ಪ ದೇವಾಲಯದಲ್ಲಿ ಕಳಸಗಳನಿಟ್ಟು ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು. ನಂತರ ಭಕ್ತರು ಪೊಂಗಲ್‍ಮಾಡಿ ಹಬ್ಬವನ್ನು ಸಂಭ್ರಮಿಸಿದರು. ಮಧ್ಯಾಹ್ನ ನೆರೆದಿದ್ದ ಭಕ್ತರಿಗೆ ಅನ್ನಸಂತರ್ಪಣೆ ನೆರವೇರಿತು. ಪೊಂಗಲ್ ಆಚರಣೆಯಲ್ಲಿ ಸದಸ್ಯರಾದ ಎಸ್.ಸುರೇಶ್, ಎಸ್.ಸುಂದರೇಶ, ಎಂ.ರಾಜಾ, ಎಂ.ಗಣೇಶ, ರಾಜ, ಜಗದೀಶ, ವೆಂಕಟೇಶ, ಗಣೇಶ, ಸುಭ್ರಮಣಿ, ಮುರುಗೇಶ, ಗುಣಶೇಖರ, ಏಳುಮಲೈ ಹಾಗೂ ಶರವಣ ಇತರರು ಹಾಜರಿದ್ದರು.