ಚೆಟ್ಟಳ್ಳಿ ಜ.15 NEWS DESK : ಇತಿಹಾಸ ಪ್ರಸಿದ್ಧ ಚೆಟ್ಟಳ್ಳಿ ಗ್ರಾಮದ ಈರಳೆ ಶ್ರೀ ಭಗವತಿ( ಪೊವ್ವೊದಿ) ದೇವಾಲಯದ ಬಳಿ ನೂತನವಾಗಿ ನಿರ್ಮಿಸಿದ ಅರ್ಚಕರ ವಸತಿ ಗೃಹವನ್ನು ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಉದ್ಘಾಟಿಸಿದರು. ಮೊದಲಿಗೆ ಈರಳೆ ಶ್ರೀ ಭಗವತಿ ದೇವಿಗೆ ಸಂಕ್ರಾಂತಿ ಹಬ್ಬದ ವಿಶೇಷ ಪೂಜೆಸಲ್ಲಿಸಲಾಯಿತು. ಕಾರ್ಯಕ್ರಮದಲ್ಲಿ ಪೊರಿಮಂಡ ದಿನಮಣಿ ಪೂವಯ್ಯ ಸ್ವಾಗತಿಸಿ, ದೇವಾಲಯದ ಅಭಿವೃದ್ಧಿ ಕಾರ್ಯದ ಬಗ್ಗೆ ವಿವರಿಸಿದರು. ಇದೇ ಸಂದರ್ಭ ದೇವಾಲಯ ಸಮಿತಿ ವತಿಯಿಂದ ಗ್ರಾಮದ ಅಭಿವೃದ್ಧಿಗೆ ಸಹಕರಿಸುವಂತೆ ಶಾಸಕರಿಗೆ ಮನವಿ ಸಲ್ಲಿಸಲಾಯಿತು. ಶಾಸಕ ಡಾ.ಮಂತರ್ ಗೌಡ ಮಾತನಾಡಿ ದೇವಾಲಯದ ಅಭಿವೃದ್ಧಿ ಕಾರ್ಯದ ಬಗ್ಗೆ ಶ್ಲಾಘಿಸಿದರು. ಗ್ರಾಮದ ರಸ್ತೆ, ಸೇತುವೆ, ವಿದ್ಯುತ್ ಹಾಗೂ ವಿವಿಧ ಕಾಮಗಾರಿ ಕೈಗೊಳ್ಳುವ ಬಗ್ಗೆ, ಜನರ ಸಮಸ್ಯೆ ಪರಿಹಾರಕ್ಕೆ ಸದಾ ಸಿದ್ಧನಿರುವುದಾಗಿ ಭರವಸೆ ನೀಡಿದರು. ಇದೇ ಸಂದರ್ಭ ದೇವಾಲಯ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಪೊರಿಮಂಡ ದಿನಮಣಿ ಪೂವಯ್ಯ ಶಾಸಕ ಡಾ.ಮಂತರ್ ಗೌಡ , ದೇವಾಲಯದ ಅಭಿವೃದ್ಧಿಗೆ ಶ್ರಮಿಸಿದ ಪೊರಿಮಂಡ ದಿನಮಣಿ ಪೂವಯ್ಯ, ಹಿರಿಯ ರಾಜಕಾರಣಿ ಎಸ್.ಎಂ.ಚಂಗಪ್ಪ ಅವರನ್ನು ಸನ್ಮಾನಿಸಿ ಗೌರವಿಸಿದರು. ಕಾಂಗ್ರೆಸ್ ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಸ್.ಎಂ.ಚಂಗಪ್ಪ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಾದ ಸುನಿತ ಮಂಜುನಾಥ್, ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯ ಸದಸ್ಯರಾದ ಪುತ್ತರಿರ ಪಪ್ಪುತಿಮ್ಮಯ್ಯ, ಊರುತಕ್ಕರಾದ ಪೊರಿಮಂಡ ರವಿ ನಾಣಯ್ಯ ಹಾಜರಿದ್ದರು.