ನಾಪೋಕ್ಲು ಜ.15 NEWS DESK : ಬಲ್ಲಮಾವಟಿ ಗ್ರಾಮ ಪಂಚಾಯಿತಿಯ ಭಾರತ ನಿರ್ಮಾಣ ಸೇವಾ ಕೇಂದ್ರ, ಸಂಜೀವಿನಿ ಶೆಡ್ ಹಾಗೂ ಡಿಜಿಟಲ್ ಗ್ರಂಥಾಲಯ ಅರಿವು ಕೇಂದ್ರದ ನೂತನ ಕಟ್ಟಡದ ಉದ್ಘಾಟನಾ ಕಾರ್ಯಕ್ರಮ ಜ.16 ರಂದು ನಡೆಯಲಿದೆ. ಗ್ರಾಮ ಪಂಚಾಯಿತಿ ಅಧ್ಯಕ್ಷೆ ಎಂ.ಪಿ.ಶಾಂತಿ ಪೂವಯ್ಯ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಕಟ್ಟಡಗಳ ಉದ್ಘಾಟನೆಯನ್ನು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಬೋಸರಾಜು ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಪ್ರಿಯಾಂಕ್ ಖರ್ಗೆ ಉದ್ಘಾಟಿಸಲಿದ್ದಾರೆ. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ಶಾಸಕ ಎ.ಎಸ್.ಪೊನ್ನಣ್ಣ ಮತ್ತು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಪಾಲ್ಗೊಳ್ಳಲಿದ್ದಾರೆ. ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಡಾ.ಧನಂಜಯ ಸರ್ಜಿ, ಕೊಡಗು ಜಿಲ್ಲಾ ಪಂಚಾಯಿತಿ ಆಡಳಿತಾಧಿಕಾರಿ ಎನ್.ವಿ.ಪ್ರಸಾದ್, ಜಿಲ್ಲಾಧಿಕಾರಿ ವೆಂಕಟರಾಜಾ, ಕೊಡಗು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆನಂದ್ ಪ್ರಕಾಶ್ ಮೀನಾ, ಎಸ್.ಪಿ ರಾಮರಾಜನ್ ಕೆ., ಕೊಡಗು ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಧನರಾಜ್ ಜಿ, ಮಡಿಕೇರಿ ತಾಲ್ಲೂಕು ಪಂಚಾಯತಿ ಆಡಳಿತಾಧಿಕಾರಿ ಬಿ.ಎಸ್.ಚಂದ್ರಶೇಖರ್, ಮಡಿಕೇರಿ ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಶೇಖರ್ ಭಾಗವಹಿಸಲಿದ್ದಾರೆ.
ವರದಿ : ದುಗ್ಗಳ ಸದಾನಂದ.