ಬೆಂಗಳೂರು ಜ.15 NEWS DESK : ಕನ್ನಡ ಚಿತ್ರರಂಗದ ಹಿರಿಯ ನಟ ಸರಿಗಮ ವಿಜಿ (76) ನಿಧನ ಹೊಂದಿದ್ದಾರೆ. ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ವಿಜಿ ಅವರ ಅವರನ್ನು ಯಶಂಪುರದ ಬಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಇಂದು (ಜ.15) ಬೆಳಿಗ್ಗೆ ನಿಧನರಾಗಿದ್ದಾರೆ. ನಾಟಕಗಳಲ್ಲಿ ನಟಿಸುತ್ತಿದ್ದ ವಿಜಿ ಅವರ ‘ಸಂಸಾರದಲ್ಲಿ ಸರಿಗಮ’ ನಾಟಕ ಬಹಳ ಹೆಸರು ಕೊಟ್ಟಿತ್ತು. ಇದೇ ಕಾರಣಕ್ಕೆ ಅವರಿಗೆ ಸರಿಗಮ ವಿಜಿ ಹೆಸರು ಬಂದಿತ್ತು. ನಾಟಕದಿಂದ ಸಿನಿಮಾಕ್ಕೆ ಪದಾರ್ಪಣೆ ಮಾಡಿದ ವಿಜಿ ಅವರು ಹಲವಾರು ಸಿನಿಮಾಗಳಲ್ಲಿ ಪೋಷಕ ಪಾತ್ರ, ಹಾಸ್ಯ ಪಾತ್ರ ಕೆಲವೆಡೆ ವಿಲನ್ ಪಾತ್ರಗಳಲ್ಲಿಯೂ ನಟಿಸಿದ್ದಾರೆ. ಮೃತರು ಪತ್ನಿ ಇಬ್ಬರು ಮಕ್ಕಳ ಸಹಿತ ಅಪಾರ ಅಭಿಮಾನಿ, ಬಂಧುಗಳನ್ನು ಅಗಲಿದ್ದಾರೆ. ಚಾಮರಾಜಪೇಟೆಯ ಟಿ ಆರ್ ಮಿಲ್ ಬಳಿ ಬರುವ ಚಿತಾಗಾರದಲ್ಲಿ ಅಂತ್ಯ ಕ್ರಿಯೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.