ಮಡಿಕೇರಿ ಜ.15 NEWS DESK : ಲೇಖಕ ವಿನೋದ್ ಯೋಧನ ಬಗ್ಗೆ ಬರೆದ ಪುಣ್ಯಭೂಮಿ ಕಾದಂಬರಿ ಪುಸ್ತಕ ಬಿಡುಗಡೆಗೊಂಡಿತು. ಪೊನ್ನಂಪೇಟೆ ಕೊಡವ ಸಮಾಜದ ಸಭಾಂಗಣದಲ್ಲಿ ವಿಧಾನ ಪರಿಷತ್ ಸದಸ್ಯ ಎಂ.ಪಿ.ಸುಜಾ ಕುಶಾಲಪ್ಪ ಪುಸ್ತಕ ಅನಾವರಣ ಮಾಡಿದರು. ಕಾಳಿಮಾಡ ಮೋಟಯ್ಯ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಕ್ತಿ ದಿನಪತ್ರಿಕೆಯ ಸಲಹಾ ಸಂಪಾದಕ ಬಿ.ಜಿ.ಅನಂತಶಯನ, ಕನ್ನಡ ಸಾಹಿತ್ಯ ಪರಿಷತ್‍ನ ಜಿಲ್ಲಾಧ್ಯಕ್ಷ ಕೇಶವ ಕಾಮತ್ ಸೇರಿದಂತೆ ಮತ್ತಿತರ ಗಣ್ಯರು ಪಾಲ್ಗೊಂಡಿದ್ದರು.