ಮಡಿಕೇರಿ ಜ.15 NEWS DESK : ವಿರಾಜಪೇಟೆ ತಾಲ್ಲೂಕು ಅರ್ಜಿ ಗ್ರಾಮ ಪಂಚಾಯತಿ ವ್ಯಾಪ್ತಿಯ ತೆರ್ಮೆಕಾಡು ಕಾಲೋನಿಯ ರಸ್ತೆ ಅಭಿವೃದ್ಧಿ ಕಾಮಗಾರಿಯು SCPTSP ಅನುದಾನದಲ್ಲಿ ಕಾರ್ಯಗತಗೊಂಡಿದೆ. ಈ ಕಾಮಗಾರಿಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ರೂ.5.5 ಲಕ್ಷ ಅನುದಾನವನ್ನು ಒದಗಿಸಿದ್ದು, ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದ್ದಾರೆ.