ಬೆಂಗಳೂರು ಜ.15 NEWS DESK : ನಗರದ ಚಾಮರಾಜಪೇಟೆಯಲ್ಲಿ ಹಸುಗಳ ಕೆಚ್ಚಲು ಕತ್ತರಿಸಿದ ಘಟನೆಗೆ ಸಂಬಂಧಿಸಿದಂತೆ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಜಾನುವಾರುಗಳ ಮಾಲೀಕರಿಗೆ ಮೂರು ಹಸುಗಳನ್ನು ಉಡುಗೊರೆಯಾಗಿ ನೀಡಿದ್ದಾರೆ. ಇದರೊಂದಿಗೆ ಕುಟುಂಬಕ್ಕೆ ಮೂರು ಲಕ್ಷ ರೂ.ಗಳ ಪರಿಹಾರವನ್ನು ನೀಡಿದ್ದಾರೆ. ಈ ವೇಳೆ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಾಸೀರ್ ಅಹ್ಮದ್, ಕೆಎಂಡಿಸಿ ಅಧ್ಯಕ್ಷ ಅಲ್ತಾಫ್ ಖಾನ್, ಮುಖಂಡರಾದ ಅತುಷ್, ಗೌಸಿ, ವಿನಾಯಕ್, ಪ್ರಸಾದ್ ಇದ್ದರು. ಗಾಯಗೊಂಡ ಹಸುಗಳನ್ನು ಚಿಕಿತ್ಸೆಗಾಗಿ ಚಾಮರಾಜಪೇಟೆಯ ಪಶು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.