ಮಡಿಕೇರಿ ಜ.15 NEWS DESK : ಮೈಸೂರು ಜಿಲ್ಲಾ ಕಿವುಡರ ಸಂಘದ 10ನೇ ವಾರ್ಷಿಕೋತ್ಸವವು ಸಂಭ್ರಮದಿಂದ ನಡೆಯಿತು. ಮೈಸೂರಿನ ರಾಹುಲ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯ ಕಿವುಡರ ಕ್ಷೇಮಾಭಿವೃದ್ಧಿ ಸಂಸ್ಥೆಯ ಅಧ್ಯಕ್ಷ ಉಮಾ ಶಂಕರ, ಮೈಸೂರು ಜಿಲ್ಲಾ ಕಿವುಡರ ಸಂಘದ ಅಧ್ಯಕ್ಷ ಮೂರ್ತಿ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಕೊಡಗು ಜಿಲ್ಲಾ ಕಿವುಡರ ಸಂಘದ ಅಧ್ಯಕ್ಷೆ ಗೌರು ಎಂ.ಸೋಮಣ್ಣ, ಉಪಾಧ್ಯಕ್ಷ ಶಂಕರ ನಾರಾಯಣ, ಕಾರ್ಯದರ್ಶಿ ರಂಜಿತ್, ಸಹಕಾರ್ಯದರ್ಶಿ ನಾಗೇಶ್, ಖಜಾಂಚಿ ಸುರೇಶ್ ಸೇರಿದಂತೆ ವಿವಿಧ ಜಿಲ್ಲೆಯ 25 ಕಿವುಡರ ಸಂಸ್ಥೆಯ ಪದಾಧಿಕಾರಿಗಳು ಪಾಲ್ಗೊಂಡಿದ್ದರು. ಸಭಾ ಕಾರ್ಯಕ್ರಮದ ನಂತರ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಪಾಲ್ಗೊಂಡಿದ್ದ ವಿವಿಧ ಸಂಸ್ಥೆಗೆ ನೆನಪಿನ ಕಾಣಿಕೆ ನೀಡಲಾಯಿತು.