ಮಡಿಕೇರಿ ಜ.15 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕೊಡಗು ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಹಿರಿಯ ನಾಗರಿಕರಿಗೆ ನೇತ್ರ ತಪಾಸಣಾ ಉಚಿತ ಶಿಬಿರ ನಡೆಯಲಿದೆ. ಜ.20 ರಂದು ಸೋಮವಾರಪೇಟೆ ತಾಲ್ಲೂಕಿನವರಿಗೆ ಸೋಮವಾರಪೇಟೆ ತಾಲ್ಲೂಕು ಆರೋಗ್ಯ ಕೇಂದ್ರದಲ್ಲಿ, ಜ.21 ರಂದು ಕುಶಾಲನಗರ ತಾಲ್ಲೂಕಿನವರಿಗೆ ಕುಶಾಲನಗರ ಸಮುದಾಯ ಆರೋಗ್ಯ ಕೇಂದ್ರದಲ್ಲಿ, ಜನವರಿ, 22 ರಂದು ಪೊನ್ನಂಪೇಟೆ ತಾಲ್ಲೂಕಿನವರಿಗೆ ಪೊನ್ನಂಪೇಟೆ ಉಪ ಆರೋಗ್ಯ ಕೇಂದ್ರದಲ್ಲಿ, ಜನವರಿ, 23 ರಂದು ವಿರಾಜಪೇಟೆ ತಾಲ್ಲೂಕಿನವರಿಗೆ ವಿರಾಜಪೇಟೆ ತಾಲ್ಲೂಕು ಆಸ್ಪತ್ರೆಯಲ್ಲಿ ಹಾಗೂ ಜನವರಿ, 24 ರಂದು ಮಡಿಕೇರಿ ತಾಲ್ಲೂಕಿನವರಿಗೆ ಮಡಿಕೇರಿ ಜಿಲ್ಲಾ ಆಸ್ಪತ್ರೆಯಲ್ಲಿ ನೇತ್ರ ತಪಾಸಣಾ ಶಿಬಿರ ನಡೆಯಲಿದೆ. ಶಿಬಿರದ ಪ್ರಯೋಜನವನ್ನು ಜಿಲ್ಲೆಯ ಹಿರಿಯ ನಾಗರಿಕರು ಪಡೆದುಕೊಳ್ಳುವಂತೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ. ಹಿರಿಯ ನಾಗರಿಕರು ತಪಾಸಣಾ ಶಿಬಿರಕ್ಕೆ ಹಾಜರಾಗಲು ಬೇಕಾದ ದಾಖಲೆಗಳು: 60 ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ ಸಂಬಂಧ ಜನ್ಮ ದಿನಾಂಕ ನಮೂದಾಗಿರುವ ದಾಖಲಾತಿ (ಹಿರಿಯ ನಾಗರಿಕರ ಗುರುತಿನ ಚೀಟಿ, ಪ್ಯಾನ್ ಕಾರ್ಡ್, ಆಧಾರ್ ಕಾರ್ಡ್, ಚುನಾವಣಾ ಗುರುತಿನ ಚೀಟಿ, ಜನನ ಪ್ರಮಾಣ ಪತ್ರ, ಶಾಲಾ/ ಕಾಲೇಜು ದಾಖಲಾತಿ, ಇನ್ನಿತರ ಯಾವುದಾದರೊಂದು) ಬಿ.ಪಿ.ಎಲ್ ಪಡಿತರ ಚೀಟಿ ಹೊಂದಿರುವ ಹಿರಿಯ ನಾಗರಿಕರಾಗಿರಬೇಕು. ಆಧಾರ್ ಕಾರ್ಡ್ ಪ್ರತಿ, ಪಾಸ್ ಪೋರ್ಟ್ ಅಳತೆಯ ಫೋಟೋ ತರಬೇಕು. ಹೆಚ್ಚಿನ ವಿವರಗಳಿಗೆ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಚೈನ್‍ಗೇಟ್, ಮಡಿಕೇರಿ ದೂರವಾಣಿ ಸಂಖ್ಯೆ 08272-295829, ಹಿರಿಯ ನಾಗರಿಕರ ಸಹಾಯವಾಣಿ ಕೇಂದ್ರ, ಮಡಿಕೇರಿ, ಕೊಡಗು ಜಿಲ್ಲೆ, ದೂರವಾಣಿ ಸಂಖ್ಯೆ: 08272-221215, ಉಚಿತ ಕರೆ: 1090. ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ವಿಮಲ ಅವರು ತಿಳಿಸಿದ್ದಾರೆ.