ಮಡಿಕೇರಿ ಜ.15 NEWS DESK : ಮಡಿಕೇರಿ 66/11ಕೆ.ವಿ ವಿದ್ಯುತ್ ಉಪಕೇಂದ್ರದಿಂದ ಹೊರಹೊಮ್ಮುವ, ಎಫ್3 ಗದ್ದಿಗೆ ಫೀಡರ್‍ನಲ್ಲಿ ವಿದ್ಯುತ್ ವಾಹಕ ಬದಲಾವಣೆ ಕಾಮಗಾರಿಯನ್ನು ಜ.16 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ ನಿರ್ವಹಿಸಲಾಗುವುದು. ಆದ್ದರಿಂದ ರಾಣಿಪೇಟೆ, ಕಾನ್ವೆಂಟ್ ಜಂಕ್ಷನ್, ಐಟಿಐ ಕಾಲೇಜು ಹಿಂಬಾಗ, ಕಾವೇರಿ ಲೇಔಟ್, ಟಿ.ಜಾನ್ ಲೇಔಟ್ ಹಾಗೂ ಸುತ್ತಮುತ್ತಲ ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಸೆಸ್ಕ್ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಕೋರಿದ್ದಾರೆ.