ಸುಂಟಿಕೊಪ್ಪ ಜ.16 NEWS DESK : ಗರಗಂದೂರಿನ ಮಲ್ಲಿಕಾರ್ಜುನ ನಗರದ ಶ್ರೀ ಮಲಿಕಾರ್ಜುನ ಮತ್ತು ಶ್ರೀಚಾಮುಂಡೇಶ್ವರಿ ದೇವಾಲಯದಲ್ಲಿ ಮಕರಸಂಕ್ರಾಂತಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ ನಡೆಯಿತು. ಮುಂಜಾನೆಯಿಂದಲೇ ವಿವಿಧ ಪೂಜಾ ಕೈಂಕರ್ಯಗಳು ಜರುಗಿತು. ಸಂಜೆ ಶ್ರೀ ಮಲಿಕಾರ್ಜುನ ಮತ್ತು ಶ್ರೀಚಾಮುಂಡೇಶ್ವರಿ ಪರಿವಾರ ದೇವರುಗಳಿಗೆ ವಿಶೇಷ ಪೂಜೆ ನೆರವೇರಿತು. ವಿವಿಧ ಗ್ರಾಮಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾಧಿಗಳು ಪಾಲ್ಗೊಂಡು ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಿದರು. ಮಕರ ಸಂಕ್ರಾತಿಯ ಅಂಗವಾಗಿ ದೇವಾಲಯವನ್ನು ಬಣ್ಣ ಬಣ್ಣದ ಹೂಗಳಿಂದ ಸಿಂಗಾರಿಸಲಾಗಿತ್ತು.