ಮಡಿಕೇರಿ ಜ.16 NEWS DESK : ವಿರಾಜಪೇಟೆಯ ಕೂರ್ಗ್ ಇನ್ಸ್ಟಿಟ್ಯೂಟ್ ಆಫ್ ಡೆಂಟಲ್ ಸೈನ್ಸ್ ಸಂಸ್ಥೆಯು ಈ ಭಾಗಕ್ಕೆ ಹೆಮ್ಮೆ ನೀಡಿರುವುದು ಮಾತ್ರವಲ್ಲದೆ ಅಸಂಖ್ಯಾತ ವಿದ್ಯಾರ್ಥಿಗಳಿಗೆ ತಮ್ಮ ಭವಿಷ್ಯವನ್ನು ರೂಪಿಸುವುದರಲ್ಲಿ ಉತ್ತಮ ಕೊಡುಗೆ ನೀಡಿದೆ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಸ್ಮರಿಸಿದರು. ವಿರಾಜಪೇಟೆಯ ಕೂರ್ಗ್ ಇನ್ಸ್ಟಿಟ್ಯೂಟ್ ಆಫ್ ಡೆಂಟಲ್ ಸೈನ್ಸ್ ಸಂಸ್ಥೆಯ ಬೆಳ್ಳಿ ಮಹೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದರು. ಸಂಸ್ಥೆಯು ಇದೇ ರೀತಿ ಮುಂದುವರೆದು ಸಮಾಜಕ್ಕೆ ಉತ್ತಮ ವೈದ್ಯರನ್ನು ನೀಡುವುದೊಂದಿಗೆ ತಮ್ಮ ಸಂಸ್ಥೆಯ ಕೀರ್ತಿಯನ್ನು ಮತ್ತಷ್ಟು ಉತ್ತುಂಗಕ್ಕೆ ಏರಿಸುವಂತಾಗಲಿ ಎಂದು ಶುಭ ಹಾರೈಸಿದರು.
ಈ ಸಂದರ್ಭ ಕಾರ್ಯಕ್ರಮ ಆಯೋಜಕರು ಹಾಗೂ ಪ್ರಮುಖರು ಉಪಸ್ಥಿತರಿದ್ದರು.